ಮೊನ್ನೆಯಷ್ಟೇ ಕಿಚ್ಚ ಸುದೀಪ್ (Kiccha Sudeep) ತಾವು ಬಸವರಾಜ ಬೊಮ್ಮಾಯಿ (Basavaraja Bommai) ಅವರನ್ನು ‘ಮಾಮ’ (Maama)ಎಂದು ಕರೆಯುವುದಾಗಿ ಹೇಳಿಕೊಂಡಿದ್ದರು. ಚಿಕ್ಕ ವಯಸ್ಸಿನಿಂದಲೇ ಬೊಮ್ಮಾಯಿ ಅವರ ಜೊತೆ ಒಡನಾಟ ಹೊಂಡಿದ್ದೇನೆ. ಆವತ್ತಿನಿಂದಲೂ ಅವರನ್ನು ಮಾಮ ಎಂದೇ ಕರೆಯುತ್ತೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟ ಪಡಿಸಿದ್ದರು. ಈ ಮಾತು ಸಾಕಷ್ಟು ಟ್ರೋಲ್ ಆಗಿತ್ತು.
ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದೀಪ್ ಗೆ ‘ಬಾಸ್’ (Boss) ಎಂದು ಕರೆದಿದ್ದಾರೆ. ಈ ಮಾತು ಕೂಡ ಟ್ರೋಲ್ ಆಗುತ್ತಿದೆ. ಸಾಕಷ್ಟು ಸಂಖ್ಯೆಯಲ್ಲಿ ಸುದೀಪ್ ಅಭಿಮಾನಿಗಳು ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಸುದೀಪ್ ಅಭಿಮಾನಿಗಳು ಈ ವಿಡಿಯೋ ಹಂಚಿಕೊಳ್ಳುವುದಕ್ಕೆ ಕಾರಣವೂ ಇದೆ. ಬಾಸ್ ಅನ್ನುವ ಪದಕ್ಕಾಗಿ ಹಲವು ವರ್ಷಗಳಿಂದ ಗಾಂಧಿನಗರದಲ್ಲಿ ಕಿತ್ತಾಟ ಶುರುವಾಗಿದೆ. ಇದನ್ನೂ ಓದಿ: ಕರಣ್ ಜೋಹಾರ್ ವಿರುದ್ಧ ಮತ್ತೆ ಕೆಂಡಕಾರಿದ ಕಂಗನಾ ರಣಾವತ್
ತಮ್ಮನ್ನು ಬೆಂಬಲಿಸಿದ ಕಾರಣಕ್ಕಾಗಿ ಸುದೀಪ್ ಸಾಕಷ್ಟು ಟೀಕೆಗೆ ಒಳಗಾಗಿದ್ದಾರೆ. ಈ ಕುರಿತು ಏನು ಹೇಳುತ್ತೀರಿ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆ ಉತ್ತರಿಸಿದ ಬೊಮ್ಮಾಯಿ, ‘ನಾನೇನಪ್ಪ ಮಾಡ್ಲಿ? ಬೆಂಬಲದ ವಿಷಯವಾಗಿ ಬಾಸ್ (ಸುದೀಪ್) ಮೊನ್ನೆ ಎಲ್ಲವನ್ನೂ ಸ್ಪಷ್ಟ ಪಡಿಸಿದ್ದಾರಲ್ಲ. ಮತ್ತೆ ಏನು ಹೇಳೋದು’ ಎಂದಷ್ಟೇ ಉತ್ತರಿಸಿದ್ದಾರೆ. ಈ ಮಾತಿನ ಮಧ್ಯ ಬಂದ ‘ಬಾಸ್’ ಪದವು ಸಾಕಷ್ಟು ವೈರಲ್ ಆಗಿದೆ.
ಸುದೀಪ್ ಅವರ ಖಾಸಗಿ ವಿಡಿಯೋ ವಿಚಾರವಾಗಿಯೂ ಸಿಎಂ ಪ್ರತಿಕ್ರಿಯೆ ನೀಡಿದ್ದು, ಅದಕ್ಕೂ ಅವರು ಬೆಂಬಲಿಸಿದ್ದಕ್ಕೂ ಯಾವುದೇ ಸಂಬಂಧವಿಲ್ಲ. ಅದು ಮುಗಿದ ನಂತರವೇ ಅವರು ಪತ್ರಿಕಾಗೋಷ್ಠಿಗೆ ಬಂದಿದ್ದು. ಬೆಂಬಲಿಸಿದ್ದಕ್ಕೆ ವಿಡಿಯೋ ಬೆದರಿಕೆ ಹಾಕಿಲ್ಲ ಎನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ.