ಬೆಳಗಾವಿಯಲ್ಲಿ MES ಪುಂಡರ ದಾಂಧಲೆ – ರಾತ್ರಿ ಏನೇನು ಮಾಡಿದ್ದಾರೆ?

Advertisements

– ಪೆಟ್ರೋಲ್ ಬಾಟಲಿ ಹಿಡಿದು ಬಸ್ಸಿಗೆ ಬೆಂಕಿ ಹಚ್ಚಲು ಯತ್ನ
– ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪ

ಬೆಳಗಾವಿ: ಕಳೆದ ರಾತ್ರಿ ಎಂಇಎಸ್ ಕಾರ್ಯಕರ್ತರು ನಡೆಸಿದ್ದ ದಾಂಧಲೆ ಕುರಿತ ಇಂಚಿಂಚೂ ಮಾಹಿತಿಯ ವೀಡಿಯೋಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ

ಶುಕ್ರವಾರ ರಾತ್ರಿ 10:0ರ ವೇಳೆಗೆ ಮುಖಕ್ಕೆ ಮಾಸ್ಕ್ ಹಾಗೂ ಟೋಪಿ ಹಾಕಿಕೊಂಡು ಬಂದ 6-7 ಜನರಿದ್ದ 5 ಎಂಇಎಸ್ ಗ್ಯಾಂಗ್ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕನ್ನಡದ ನಾಮಫಲಕಗಳನ್ನು ಕೆಳಕ್ಕುರುಳಿಸಿ ಕಾಲಿನಿಂದ ಹಾನಿಗೊಳಿಸಿ ಹೋಟೆಲ್‍ಗಳ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಕಾರಿನ ಮೇಲೆ ಶಿವಸೇನೆ ಪುಂಡರಿಂದ ಕಲ್ಲು ತೂರಾಟ

Advertisements

ದುಷ್ಕರ್ಮಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಹಾನಿಪಡಿಸಿ ಖಡ್ಗ, ಗುರಾಣಿ ಬೇರೆ, ಬೇರೆ ಕಡೆ ಇಟ್ಟು ವಿಕೃತಿಗೊಳಿಸಿ ದುಷ್ಕೃತ್ಯವೆಸಗಿದ್ದಾರೆ. ಜೊತೆಗೆ ಅಧಿವೇಶನದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 20ಕ್ಕೂ ಹೆಚ್ಚು ವಾಹನಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಹಿಂಸಾಚಾರ ಕೃತ್ಯವೆಸಗಿದ್ದಾರೆ.

Advertisements

ನಗರದ ವಿವಿಧೆಡೆ ಲಾಡ್ಜ್‌ಗಳ ಮುಂದೆ ನಿಲ್ಲಿಸಿದ್ದ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಲಾಗಿದ್ದು, ಆರ್‌ಟಿಓ ವೃತ್ತದ ಬಳಿಯ ನಿರ್ಮಾಣ ಹಂತದ ಪೊಲೀಸ್ ಕಾಂಪ್ಲೆಕ್ಸ್‌ನ ಪಾರ್ಕಿಂಗ್‍ನಲ್ಲಿ ವಾಹನಗಳನ್ನು ಜಖಂಗೊಳಿಸಿದ್ದಾರೆ. ಇದನ್ನೂ ಓದಿ: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

ಬೆಳಗಾವಿ ಹೊರವಲಯದಲ್ಲಿ ಕೂಡ ಕೆಎಸ್ಆರ್‌ಟಿಸಿ ಬಸ್ ಮೇಲೆ ಕಿಡಿಕೇಡಿಗಳು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಓರ್ವ ಕೈಯಲ್ಲಿ ಪೆಟ್ರೋಲ್ ಬಾಟಲಿ ಹಿಡಿದುಕೊಂಡು ಬಸ್‍ಗೆ ಬೆಂಕಿ ಹಚ್ಚಲು ಯತ್ನಿಸಿದ್ದಾನೆ.

ಈ ಘಟನೆಯ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯ ಅವರು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದು, ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ ಆಗಿದೆ. ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ. ಇಂತಹ ಘಟನೆ ನಡೆಯದಂತೆ ದೀರ್ಘಾವಧಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಇದನ್ನೂಓದಿ:  ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

ರಾಷ್ಟ್ರಭಕ್ತರ ಪ್ರತಿಮೆಗೆ ಭಂಗ ತರುವುದು ಸರಿಯಲ್ಲ. ದೇಶಕ್ಕಾಗಿ ತ್ಯಾಗ ಮಾಡಿದವರನ್ನು ಗೌರವಿಸಬೇಕು. ನಾಡಿಗೆ ಹೋರಾಡಿದವರ, ತ್ಯಾಗ ಮಾಡಿದವರ ಗೌರವ ಉಳಿಸಬೇಕು. ನಾಡಿನಲ್ಲಿ ಕ್ಷೋಭೆ ಉಂಟುಮಾಡುವುದು ಸರಿಯಲ್ಲ. ಕೆಲವೇ ಕೆಲವು ಪುಂಡರು ಇಂತಹ ದುಷ್ಕೃತ್ಯ ಮಾಡುತ್ತಿದ್ದು, ಅವರನ್ನು ಸದೆಬಡಿಯುತ್ತೇವೆ”

Advertisements
Exit mobile version