ಬರ್ನ್: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಈ ವೇಳೆ ಬೊಮ್ಮಾಯಿ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿ ಮಾಡಿದರು.
ಹವಾಮಾನ ಬದಲಾವಣೆ ಹಾಗೂ ಪರಿಸರ ಮಾಲಿನ್ಯ ಕುರಿತ ಗೋಷ್ಠಿಗೂ ಮುನ್ನ ಸದ್ಗುರು ಬೊಮ್ಮಾಯಿಯವರನ್ನು ಭೇಟಿ ಮಾಡಿದರು. ಸಿಎಂ ನಡೆದು ಬರುತ್ತಿದ್ದುದನ್ನು ನೋಡಿ ಸದ್ಗುರು ಏನಾಗಿದೆ ಎಂದು ವಿಚಾರಿಸಿದರು. ಈ ವೇಳೆ ಬೊಮ್ಮಾಯಿ ತಮ್ಮ ಮಂಡಿ ನೋವಿನ ಸಮಸ್ಯೆ ಬಗ್ಗೆ ಜಗ್ಗಿ ವಾಸುದೇವ್ ಬಳಿ ಹೇಳಿಕೊಂಡರು. ಇದನ್ನೂ ಓದಿ: ಪರಿಷತ್ ಚುನಾವಣೆ – ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಕಾಂಗ್ರೆಸ್-ಬಿಜೆಪಿಯಲ್ಲಿ ಇನ್ನೂ ಅಂತಿಮವಾಗದ ಅಭ್ಯರ್ಥಿಗಳು
Advertisement
Advertisement
ಶೃಂಗಸಭೆಯಲ್ಲಿ ಸಿಎಂ ಬೊಮ್ಮಾಯಿ ನೀಲಿ ಬಣ್ಣದ ಸೂಟ್ ಧರಿಸಿ ಮಿಂಚಿದ್ದಾರೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಹಾಗೂ ಸಿಎಂ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಸಿಎಂಗೆ ಸಾತ್ ನೀಡಿದ್ದಾರೆ. ಇದನ್ನೂ ಓದಿ: ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್
Advertisement
Advertisement
ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾರತವನ್ನು ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದಾರೆ. ಸಿಎಂ ಜೊತೆ 8 ಜನರ ತಂಡ ದಾವೋಸ್‌ಗೆ ತೆರಳಿದ್ದು, ಸಿಎಂ ಆದ ಬಳಿಕ ಬೊಮ್ಮಾಯಿಯವರಿಗೆ ಇದು ಮೊದಲ ವಿದೇಶ ಪ್ರವಾಸವಾಗಿದೆ.