ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಸರ್ಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ವೈಫಲ್ಯ, ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಹಿನ್ನಡೆ ವಿಚಾರವನ್ನು ಪ್ರಸ್ತಾಪಿಸಿ ಐವರು ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ನಿಯಂತ್ರಣದ ದೇಗುಲಗಳಿಗೆ ಶೀಘ್ರ ಸ್ವಾತಂತ್ರ್ಯ- ಆದಾಯ ದೇವಾಲಯಗಳ ಅಭಿವೃದ್ಧಿಗೆ ಮೀಸಲು
Advertisement
Advertisement
ಚಿಕ್ಕಮಗಳೂರು, ಬೆಳಗಾವಿ, ಮೈಸೂರು, ವಿಜಯನಗರ, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ವಾರ್ನಿಂಗ್ ನೀಡಿದ್ದಾರೆ. ಚಿಕ್ಕಬಳ್ಳಾಪುರ, ಮಂಡ್ಯ ಸೇರಿ ಏಳು ಜಿಲ್ಲೆಗಳಲ್ಲಿ ಅರ್ಧಕರ್ಧ ಕೆಲಸ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಬೇಡಿಕೆ
Advertisement
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಚಿವಾರದ ಆರ್.ಅಶೋಕ್, ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಹಾಲಪ್ಪ ಆಚಾರ್, ಅಂಗಾರ, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.