ಬೆಂಗಳೂರು: ಕೋವಿಡ್ ಯಾರನ್ನೂ ಬಿಟ್ಟಿಲ್ಲ. ಹೆಚ್.ಡಿ.ದೇವೇಗೌಡರಿಗೆ ಕೊರೊನಾ ತೀವ್ರತೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಕೊರೊನಾ ದೃಢಪಟ್ಟಿರುವ ಬಗ್ಗೆ ಆರ್.ಟಿ. ನಗರದ ನಿವಾಸದ ಬಳಿ ಪ್ರತಿಕ್ರಿಯಿಸಿದ ಅವರು, ದೇವೇಗೌಡರೊಂದಿಗೆ ಮಾತನಾಡುತ್ತೇನೆ. ಅವರ ಕುಟುಂಬ, ಮಣಿಪಾಲ್ ವೈದ್ಯರ ಜೊತೆಗೂ ಮಾತಾಡುತ್ತೇನೆ. ಈ ವಯಸ್ಸಲ್ಲೂ ಅವರು ಆರೋಗ್ಯವಾಗಿದ್ದಾರೆ. ಆದರೆ ಕೋವಿಡ್ ಯಾರನ್ನೂ ಬಿಟ್ಟಿಲ್ಲ. ಹೆಚ್.ಡಿ.ದೇವೇಗೌಡರಿಗೆ ಕೊರೊನಾ ತೀವ್ರತೆ ಇರುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ
Advertisement
Advertisement
ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವ ವಿಚಾರವಾಗಿ ಮಾತನಾಡಿದ ಅವರು, ವೀಕೆಂಡ್ ಕರ್ಫ್ಯೂ ರದ್ದು ನಿರ್ಧಾರ ಒತ್ತಡದಿಂದ ಮಾಡಿದ್ದಲ್ಲ. ಕೇಸ್‍ಗಳು ಜಾಸ್ತಿ ಇದ್ದರೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಗುಣಮುಖರಾಗುವವರ ದರವೂ ಜಾಸ್ತಿ ಇದೆ. ಇಂಥ ಸಂದರ್ಭದಲ್ಲಿ ಹೇಗೆ ನಿರ್ವಹಣೆ ಮಾಡಬೇಕೆಂಬುದರ ಬಗ್ಗೆ ತಜ್ಞರು ವಿಶ್ವಾಸ ಮೂಡಿಸಿದ್ದಾರೆ. ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು. ಜನರಿಗೂ ಸಮಸ್ಯೆ ಆಗಬಾರದು ಅಂತ ನಿರ್ಧರಿಸಲಾಗಿದೆ ಎಂದಿದ್ದಾರೆ.
Advertisement
Advertisement
ಕೃಷ್ಣಾ ಸೇರಿದಂತೆ ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ರಾಜ್ಯದ ವಾದ ಮಂಡಿಸುವ ತಜ್ಞರೊಂದಿಗೆ ಸಭೆ ಮಾಡುತ್ತಿದ್ದೇವೆ. ನಮ್ಮ ಕಾನೂನು ತಜ್ಞರ ತಂಡ ಕೂಡ ವರ್ಚುವಲ್ ಸಭೆಯಲ್ಲಿ ಭಾಗವಹಿಸುತ್ತಿದೆ. ನಮ್ಮ ಜಜಲವ್ಯಾಜ್ಯಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೋವಾ ಚುನಾವಣೆ- ಜಗದೀಶ್ ಶೆಟ್ಟರ್ ಪ್ರಚಾರ, ಮತಯಾಚನೆ
ಹಾಲು, ನೀರು, ವಿದ್ಯುತ್ ದರ ಏರಿಕೆ ಪ್ರಸ್ತಾಪಗಳ ವಿಚಾರವಾಗಿ ಮಾತನಾಡಿದ ಅವರು, ದರ ಏರಿಕೆಗಳ ಬಗ್ಗೆ ಯಾವುದೇ ತೀರ್ಮಾನಗಳು ಆಗಿಲ್ಲ. ಅವಸರದ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳಲ್ಲ. ಎಲ್ಲ ಆಯಾಮಗಳಿಂದಲೂ ಚರ್ಚೆ ನಡೆಸುತ್ತೇವೆ. ಆಡಳಿತದಲ್ಲಿ ದರ ಏರಿಕೆ ಪ್ರಸ್ತಾಪಗಳು ಬರುವುದು ಸಹಜ ಎಂದು ಸ್ಪಷ್ಟ ಪಡಿಸಿದ್ದಾರೆ.