ಚಿಕ್ಕಬಳ್ಳಾಪುರ: ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ ಬಸವರಾಜ ಬೊಮ್ಮಾಯಿಯವರು (Basavaraj Bommai) ಜನಸಾಮಾನ್ಯರಿಗೆ ಊಟ ಉಣಬಡಿಸಿ (Served Food), ಅವರೊಂದಿಗೇ ಕೂತು ಊಟ ಸವಿದ ಬಲು ಅಪರೂಪದ ಘಟನೆ ಚಿಕ್ಕಬಳ್ಳಾಪುರದ (Chikkaballapur) ಈಶಾ ಯೋಗ ಕೇಂದ್ರದಲ್ಲಿ ಶನಿವಾರ ರಾತ್ರಿ ನಡೆದಿದೆ.
Advertisement
ಚಿಕ್ಕಬಳ್ಳಾಪುರ ತಾಲೂಕಿನ ನರಸಿಂಹದೇವರಬೆಟ್ಟದ ಬಳಿ ಈಶಾ ಫೌಂಡೇಶನ್ ವತಿಯಿಂದ ಈಶಾ ಯೋಗ ಕೇಂದ್ರ, 112 ಅಡಿ ಎತ್ತರದ ಅದಿಯೋಗಿ ಶಿವನ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ. ಇದೇ ಜಾಗದಲ್ಲಿ ನಾಗಮಂಟಪ ಉದ್ಘಾಟನಾ ಕಾರ್ಯಕ್ರಮ ನಿನ್ನೆ ನೆರವೇರಿತು. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ಮುಂದೆ ಎಲೆಕ್ಟ್ರಿಕ್ ಬಸ್‍ಗಳದ್ದೇ ಹವಾ- ಖಾಸಗೀಕರಣದ ಆತಂಕದಲ್ಲಿ ನೌಕರರು
Advertisement
ಈ ಕಾರ್ಯದಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಕಾರ್ಯಕ್ರಮ ಮುಗಿದ ನಂತರ ಜನಸಾಮಾನ್ಯರಿಗೆ ತಮ್ಮ ಕೈಯ್ಯಾರೆ ಊಟ ಬಡಿಸಿದ್ದಾರೆ. ತದನಂತರ ಜನಸಾಮಾನ್ಯರ ಜೊತೆಯಲ್ಲೇ ಕೂತು ಊಟ ಮಾಡಿದ್ದಾರೆ.
Advertisement
Advertisement
ಇಶಾ ಫೌಂಡೇಶನ್ ಸಂಸ್ಥಾಪಕರಾದ ಸದ್ಗುರು ಜಗ್ಗೀ ವಾಸುದೇವ್ ಹಾಗೂ ಸಚಿವ ಸುಧಾಕರ್ ಸಹ ಸಾಥ್ ನೀಡಿದರು. ಇದನ್ನೂ ಓದಿ: ಸ್ವಚ್ಛ ನಗರ ಪಟ್ಟಿಯಲ್ಲಿ ಬೆಂಗಳೂರು ಲಾಸ್ಟ್ – ಷರತ್ತಿನೊಂದಿಗೆ ನೂತನ ಕಸದ ಟೆಂಡರ್‌ಗೆ BBMP ಸಿದ್ಧತೆ