ಧಾರವಾಡ/ಹುಬ್ಬಳ್ಳಿ: ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Advertisement
ಬೆಲೆ ಏರಿಕೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಲೆಂಡರ್ ಗ್ಯಾಸ್ ಹಾಗೂ ತೈಲ ಬೆಲೆ ಏರಿಕೆಯೂ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಿರ್ಧಾರವಾಗುತ್ತೆ. ಇದರ ಬಗ್ಗೆ ಕಾಂಗ್ರೆಸ್ ಅವರಿಗೆ ಗೊತ್ತಿದೆ. ಹಿಂದೆ ಅವರು ಏನನ್ನು ಮಾಡಿದ್ದಾರೆ ಎಂದು ಅವರಿಗೆ ಗೊತ್ತಿದೆ. ಆಯಿಲ್ ಬಾಂಡ್ ವಿಚಾರ ಏನಾಗಿತ್ತು ಎಂದು ಕಾಂಗ್ರೆಸ್ ನಾಯಕರಿಗೂ ತಿಳಿದಿದೆ ಎಂದು ಬೆಲೆ ಎರಿಕೆ ವಿರುದ್ಧ ಆರೋಪ ಮಾಡುವವರಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ಬೆಳಗಾವಿ ಮೂವರು ನಾಯಕರನ್ನ ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ
Advertisement
ಅದೇನೇ ಇರಲಿ ಬೆಲೆ ಏರಿಕೆ ಬಗ್ಗೆ ಸೆಪ್ಟೆಂಬರ್ 5 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ ಜೊತೆ ಚರ್ಚೆ ಮಾಡುವೆ. ನಂತರ ಈ ಕುರಿತು ಪರಿಹಾರದ ಬಗ್ಗೆ ಮಾತನಾಡಬಹುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ:ತಂದಿಟ್ಟು ತಮಾಷೆ ನೋಡೋದಕ್ಕೆ ಹೇಳಿರ್ತಾರೆ – ಉಮಾಪತಿ ಬಳಿ ಕ್ಷಮೆ ಕೇಳಿದ್ದ ಭೂಗತ ಪಾತಕಿ ರವಿ
Advertisement
Advertisement
ಕೊರೊನಾ ನಕಲಿ ರಿಪೋರ್ಟ್ ಬಗ್ಗೆ ಮಾತನಾಡಿದ ಅವರು, ಕೇರಳ ಗಡಿಯಿಂದ ರಾಜ್ಯಕ್ಕೆ ನಕಲಿ ರಿಪೋರ್ಟ್ ತೆಗೆದುಕೊಂಡು ಬರುವರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪ್ರಾಥಮಿಕ ಶಾಲೆ ಅರಂಭ ಆಗಿರುವ ಬಗ್ಗೆ ಪರಿಶೀಲನೆ ಮಾಡಿಸುವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ವಿಜಯಪುರ ವಿಮಾನ ನಿಲ್ದಾಣಕ್ಕೆ 125 ಕೋಟಿ: ಗೋವಿಂದ ಕಾರಜೋಳ
ಬೊಮ್ಮಾಯಿ ಅವರು ಹುಬ್ಬಳ್ಳಿಯ ನಿವಾಸದಲ್ಲೇ ತಂಗಿದ್ದರು. ಇಂದು ದಾವಣಗೆರೆ ಕಾರ್ಯಕ್ರಮಕ್ಕೂ ತೆರಳುವ ಮುನ್ನ ಸಾರ್ವಜನಿಕರಿಂದ ಅಹವಾಲು ಆಲಿಸಿದ್ರು. ಅಲ್ಲದೇ ಹುಬ್ಬಳ್ಳಿಯ ಪ್ರಸಿದ್ಧ ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ದೀಪಾರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೂರು ಸಾವಿರ ಮಠಕ್ಕೂ ಭೇಟಿ ಮಾಡಿ ಗದ್ದುಗೆ ದರ್ಶನ ಪಡೆದಿದ್ದಾರೆ.