ಸಿಎಂ ಬೊಮ್ಮಾಯಿ ಸಿನಿಮಾ ನೋಡಿ ಕಣ್ಣೀರು ಹಾಕಿದರೆ, ಜನ ಅವರ ಸರಕಾರ ನೋಡಿ ಕಣ್ಣೀರಿಡುತ್ತಿದ್ದಾರೆ: ನಟ ಚೇತನ್

Public TV
1 Min Read
FotoJet 3 15

ಮೊನ್ನೆಯಷ್ಟೇ ರಕ್ಷಿತ್ ಶೆಟ್ಟಿ ನಟನೆಯ ‘ಚಾರ್ಲಿ 777’ ಸಿನಿಮಾ ನೋಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಭಾವುಕರಾಗಿ ಆ ಸಿನಿಮಾದ ಬಗ್ಗೆ ಮಾತನಾಡಿದ್ದರು. ಕೆಲ ತಿಂಗಳ ಹಿಂದೆ ನಿಧನ ಹೊಂದಿದ್ದ ತಮ್ಮ ಮನೆಯ ನಾಯಿಯನ್ನು ನೆನಪಿಸಿಕೊಂಡಿದ್ದರು. ಚಾರ್ಲಿ ಸಿನಿಮಾ ನೋಡಿ ಅತ್ತ ಬೊಮ್ಮಾಯಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕುರಿತು ನಟ, ಸಾಮಾಜಿಕ ಹೋರಾಟಗಾರ ಚೇತನ್ ವ್ಯಂಗ್ಯವಾಡಿದ್ದಾರೆ.

chetan 13 1

ಸಿಎಂ ಬೊಮ್ಮಾಯಿ ಅವರು ಕಣ್ಣೀರಿಟ್ಟ ವಿಡಿಯೋ ನೋಡಿರುವ ಚೇತನ್, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ “ಕನ್ನಡ ಚಿತ್ರವೊಂದನ್ನು ತೆರೆ ಮೇಲೆ ನೋಡಿ ಸಿಎಂ ಬೊಮ್ಮಾಯಿ ಅವರು ಕಣ್ಣೀರು ಹಾಕಿದರೆ, ಬೊಮ್ಮಾಯಿ ಅವರ ಆಡಳಿತವನ್ನು ನೋಡಿ ಕರ್ನಾಟಕದ ಜನತೆ ಕಣ್ಣೀರು ಹಾಕುತ್ತಿದ್ದಾರೆ’ ಎಂದು ಬರೆದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ನಾನು ‘ಸಂಚಾರಿ ವಿಜಯ್’ ಹಾಗೂ ರಾಷ್ಟ್ರೀಯ ಹೆದ್ದಾರಿ 4 : ನಿರ್ದೇಶಕ ಮಂಸೋರೆ ಮನದಾಳ

Actor chetan 3

ಈ ಪೋಸ್ಟ್ ಹಾಕಿದ ಚೇತನ್ ಗೆ ಕೆಲವರು ತರಾಟೆಗೆ ತಗೆದುಕೊಂಡಿದ್ದರೆ, ಇನ್ನೂ ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ. ಸಿಎಂ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸಿನಿಮಾ ಸಂಬಂಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವುದು ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಸಖತ್ ಚರ್ಚೆ ಆಗುತ್ತಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *