– ಸೋಮವಾರವೇ ನೂತನ ಸಚಿವರಿಗೆ ಖಾತೆ ಹಂಚಿಕೆ
ಕಾರವಾರ: ಕಾಂಗ್ರೆಸ್ನವರದ್ದು ತಿರುಕನ ಕನಸಾಗಿದೆ. ಅವರ ಹೇಳಿಕೆಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ಕದಂಬೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಸಚಿವರು ಪ್ರಮಾಣ ವಚನ ತೆಗೆದುಕೊಂಡಿದ್ದಾರೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳು ರಜೆ ಇರುವುದರಿಂದ ನೂತನ ಸಚಿವರಿಗೆ ಸೋಮವಾರ ಖಾತೆ ಹಂಚಿಕೆ ಮಾಡುತ್ತೇವೆ ಎಂದು ತಿಳಿಸಿದರು.
Advertisement
ಶೀಘ್ರದಲ್ಲಿ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 5ರಂದು ಬಜೆಟ್ ಮಂಡನೆ ಆಗಲಿದ್ದು, ಇದು ಮಹತ್ವ ಪೂರ್ಣ ಬಜೆಟ್ ಆಗಲಿದೆ ಎಂದು ಹೇಳಿದರು.
Advertisement
Advertisement
ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮಧ್ಯಂತರ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಸಿಎಂ, ಕಾಂಗ್ರೆಸ್ನವರದ್ದು ತಿರುಕನ ಕನಸಾಗಿದೆ. ಅವರು ವಾಸ್ತವಿಕ ಸಂಗತಿ ಅರಿತು ಮಾತನಾಡಬೇಕು. ಇಲ್ಲದೇ ಹೋದಲ್ಲಿ ಅವರಿಗೆ ಗೌರವ ಕಡಿಮೆ ಆಗುತ್ತದೆ. 3 ವರ್ಷಗಳ ಕಾಲ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಬೇಕು ಎಂಬ ಕಾರಣದಿಂದ ಅವರು ಹೀಗೆ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಮುಖಂಡರು ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ ಎಂದರು.
Advertisement
ಸರೋಜಿನಿಮಹೀಶಿ ವರದಿ ಅನುಷ್ಟಾನಕ್ಕೆ ಕ್ರಮ ಕೈಗೊಂಡಿದ್ದೇವೆ. ಅದರ ನ್ಯೂನ್ಯತೆಗಳನ್ನು ಮರು ಪರಿಶೀಲಿಸಿ ಮರು ಅನುಷ್ಠಾನ ಕೈಗೊಳ್ಳಲಾಗುವುದು ಎಂದರು.