– ಸಂತ್ರಸ್ತರ ಆಹಾರ ವಿತರಣೆಗೆ ಕಾಳಜಿಯಿಲ್ಲ
– ತಮ್ಮ ಹಸಿವಿಗೆ ಎಲ್ಲ ವ್ಯವಸ್ಥೆ ಮಾಡ್ಕೊಂಡ ಅಧಿಕಾರಿಗಳು
ಬೆಳಗಾವಿ: ಒಂದು ಕಡೆ ಜ್ವರ, ಹಸಿವಿನಿಂದ ಬಳಲಿ ಬಾಲಕ ಮೃತಪಟ್ಟರೆ ಇತ್ತ ಅಧಿಕಾರಿಗಳು ಮಾತ್ರ ಉಪಹಾರ, ಕೋಲ್ಡ್ ಡ್ರಿಂಕ್ಸ್ ವ್ಯವಸ್ಥೆ ಮಾಡಿಕೊಂಡಿದ್ದಾರೆ.
ಹೌದು. ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲಾ ಪ್ರವಾಹ ಪಿಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಉಪಹಾರ, ಸ್ನ್ಯಾಕ್ಸ್ ಗಳ ವ್ಯವಸ್ಥೆ ಮಾಡಿದ್ದಾರೆ. ಬೆಳಗಾವಿ ಉಪವಿಭಾಗದ ಅಧಿಕಾರಿಗಳ ವಾಹನದಲ್ಲಿ ಉಪಹಾರ, ಕೋಲ್ಡ್ ಡ್ರಿಂಕ್ಸ್ ಗಳನ್ನು 200 ಕ್ಕೂ ಹೆಚ್ಚು ಬಾಕ್ಸ್‍ಗಳಲ್ಲಿ ತಂದಿದ್ದಾರೆ. ನಂತರ ವೆಜ್ ಪನ್ನೀರ್ ರೋಲ್, ಕುಕ್ಕೀಸ್, ಸ್ಯಾಂಡ್ ವಿಚ್, ಫ್ರೂಟಿ, ಕೇಕ್ ಇವುಗಳನ್ನು ಸಿಎಂ ಹಿಂದೆ ಹೋಗುವ ವಾಹನಗಳಿಗೆ ಶಿಫ್ಟ್ ಮಾಡಲಾಗಿದೆ.
Advertisement
Advertisement
ಪ್ರವಾಹದಿಂದ ಒಂದಡೆ ಜನರು ಮನೆ ಮಠ ಕಳೆದುಕೊಂಡು ಊಟವಿಲ್ಲದೆ ಪರದಾಟ ಅನುಭವಿಸುತ್ತಿದ್ದರೆ, ಇತ್ತ ಅಧಿಕಾರಿಗಳು ಮಾತ್ರ ತಮ್ಮ ಹಸಿವಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಒಟ್ಟಿನಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕು ಅಧಿಕಾರಿಗಳಿಗೆ ತಮ್ಮ ಹೊಟ್ಟೆ ಬಗ್ಗೆ ಇರುವ ಕಾಳಜಿ ಸಂತ್ರಸ್ತರ ಮೇಲೆ ಯಾಕಿಲ್ಲ ಎಂಬ ಪ್ರಶ್ನೆ ಎದ್ದಿದೆ.
Advertisement
ಬಾಲಕ ಸಾವು!
ಜಿಲ್ಲೆಯ ರಾಮದುರ್ಗ ತಾಲಹ ಅಧಿಕಾರಿಗಳ ವಿರುದ್ಧ ತಾಲೂಕಿನ ಸುರೇಬಾನ್ ಗ್ರಾಮದ ಕಾಳಜಿ ಕೇಂದ್ರದಲ್ಲಿದ್ದ ದೊಡ್ಡ ಹಂಪಿಹೊಳಿ ಗ್ರಾಮದ ಅಬ್ದುಲ್ ಸಾಬ್(5) ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರವಾಹಕ್ಕೆ ಸಿಲುಕಿ ಅಬ್ದುಲ್‍ನ ಮನೆ ಬಿದ್ದಿರುವ ಹಿನ್ನೆಲೆಯಲ್ಲಿ ಬಾಲಕನ ಕುಟುಂಬ ಕಳೆದ ಒಂದು ತಿಂಗಳಿಂದ ಎಪಿಎಂಸಿ ಆವರಣದಲ್ಲಿ ಆಶ್ರಯ ಪಡೆದುಕೊಂಡಿತ್ತು. ಇಲ್ಲಿ ಸರಿಯಾದ ಆಹಾರ ಸಿಗುತ್ತಿರಲಿಲ್ಲ. ಅಲ್ಲದೆ ಬಾಲಕನಿಗೆ ಜ್ವರ ಕೂಡ ಬಂದಿತ್ತು. ಆದರೆ ಸರಿಯಾದ ಚಿಕಿತ್ಸೆ ಸಿಗದ ಪರಿಣಾಮ ಜ್ವರ ಹೆಚ್ಚಾಗಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ಬಾಲಕನ ಪೋಷಕರು ಆರೋಪಿಸಿದ್ದಾರೆ.
Advertisement
ಈ ಬಗ್ಗೆ ಅಲ್ಲಿನ ತಹಶೀಲ್ದಾರ್ ಮಾತನಾಡಿ ಮಗು ಹಸಿವಿನಿಂದ ಸಾವನ್ನಪ್ಪಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. ಕಾಳಜಿ ಕೇಂದ್ರಕ್ಕೆ ಸೋಮವಾರ ಸ್ವತಃ ನಾನೇ ಭೇಟಿ ಕೊಟ್ಟಿದ್ದೆ. ರಾತ್ರಿ ಅಲ್ಲಿ ಇದ್ದ ನಿರಾಶ್ರಿತರೆಲ್ಲರೂ ಊಟ ಮಾಡಿದ ಬಳಿಕವೇ ನಾನು ವಾಪಸ್ ಹೋದೆ. ಈ ಬಾಲಕ ಸಾವನ್ನಪ್ಪಿದ್ದು ಹಸಿವಿನಿಂದ ಅಲ್ಲ. ಆತನಿಗೆ ಜ್ವರ ಬಂದಿತ್ತು, ಆತನನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಯನ್ನೂ ಕೊಡಿಸಿದ್ದೆವು. ಆದರೂ ಜ್ವರ ನಿಯಂತ್ರಣಕ್ಕೆ ಬಾರದೇ, ಹೆಚ್ಚಾಗಿ ನೆತ್ತಿಗೆ ಏರಿದ್ದರಿಂದ ಬಾಲಕ ಸಾವನ್ನಪ್ಪಿದ್ದಾನೆ. ಒಂದು ವೇಳೆ ಕಾಳಜಿ ಕೇಂದ್ರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ, ಜಿಲ್ಲಾಧಿಕಾರಿಗಳಿಗೆ ತಿಳಿಸಿ ಅಂತಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿದ್ದು, ಇಂದು ಎಪಿಎಂಸಿಯ ಕಾಳಜಿ ಕೇಂದ್ರ ಭೇಟಿ ನೀಡಲಿದ್ದಾರೆ. ಅಲ್ಲದೆ ಕಾಳಜಿ ಕೇಂದ್ರದಲ್ಲಿ ಬಾಲಕನ ಸಾವಿನ ಬಗ್ಗೆ ತಿಳಿದು ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ.
https://www.youtube.com/watch?v=Bts1dZ54X1Q