ನವದೆಹಲಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಭದ್ರಾವತಿ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಹೀಗಾಗಿ ಬಂಡವಾಳ ಹಿಂತೆಗೆಯುವುದನ್ನು ಕೈ ಬಿಟ್ಟು ಕಾರ್ಖಾನೆ ಪುನಶ್ಚೇತನಕ್ಕೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಸಿಎಂ ಯಡಿಯೂರಪ್ಪ ಭೇಟಿಯಾದರು. ಈ ವೇಳೆ ವಿಐಎಸ್‍ಎಲ್ ಬಂಡಾವಳ ಹಿಂತೆಗೆತ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಮನವಿ ಮಾಡಿಕೊಂಡರು.
Advertisement
ಮುಖ್ಯಮಂತ್ರಿ ಶ್ರೀ @BSYBJP ಅವರು, ಕೇಂದ್ರದ ಉಕ್ಕು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಶ್ರೀ ಧರ್ಮೇಂದ್ರ ಪ್ರದಾನ್ ಅವರನ್ನು ನವದೆಹಲಿಯಲ್ಲಿ ಭೇಟಿಯಾದರು.
ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/u7FYfRlV4l
— CM of Karnataka (@CMofKarnataka) January 30, 2020
Advertisement
ವಿಐಎಸ್‍ಎಲ್ ಬಗ್ಗೆ ಶಿವಮೊಗ್ಗ ಮತ್ತು ಭದ್ರಾವತಿ ಭಾಗದ ಜನತೆಗೆ ಭಾವನಾತ್ಮಕ ಸಂಬಂಧವಿದೆ. ನೀತಿ ಆಯೋಗದ ಸಲಹೆಯಂತೆ ಬಂಡಾವಳ ಹಿಂತೆಗೆತಕ್ಕೆ ಚಾಲನೆ ನೀಡಲಾಗಿದೆ. ಆದರೆ ಈವರೆಗೂ ಯಾವುದೇ ಖಾಸಗಿ ಕಂಪನಿ ಬಂಡವಾಳ ಹೂಡಿಕೆಗೆ ಒಲವು ತೋರಿಲ್ಲ. ವಿಐಎಸ್‍ಎಲ್ ಉತ್ಪಾದಿಸುವ ಉಕ್ಕು ಉತ್ಕೃಷ್ಟ ಗುಣಮಟ್ಟದ ಕಬ್ಬಿಣವಾಗಿದ್ದು ದೇಶದಲ್ಲಿಯೇ ಹೆಸುರುವಾಸಿಯಾಗಿದೆ. ಹೀಗಾಗಿ ಬಂಡವಾಳ ಹಿಂತೆಗೆತವನ್ನು ಕೈಬಿಟ್ಟು ಕಾರ್ಖಾನೆ ಪುನಶ್ಚೇತನಕ್ಕೆ ಆದ್ಯತೆ ನೀಡಬೇಕು ಎಂದು ಸಿಎಂ ಕೇಳಿಕೊಂಡರು.
Advertisement
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಅವರ ಭೇಟಿಯ ವೇಳೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.