Connect with us

Bengaluru City

ಮೀಸಲಾತಿ ಬೇಡಿಕೆ – ಉನ್ನತ ಮಟ್ಟದ ಸಮಿತಿ ರಚನೆ

Published

on

ಬೆಂಗಳೂರು: ರಾಜ್ಯದಲ್ಲಿ ಹಲವು ಸಮುದಾಯಗಳಿಂದ ಮೀಸಲಾತಿ ಬೇಡಿಕೆ ಶುರುವಾಗಿದ್ದು ಈ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಸುಭಾಷ್ ಬಿ ಅಡಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದ್ದು, ನಿವೃತ್ತ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭಾ ಮತ್ತು ಮೈಸೂರು ಮಹಾರಾಣಿ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ|. ಬಿ.ವಿ.ವಸಂತಕುಮಾರ್ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ.

ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಸಮಿತಿ ರಚಿಸಲಾಗಿದೆ.

Click to comment

Leave a Reply

Your email address will not be published. Required fields are marked *