ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಶಿಕಾರಿಪುರದ ತಮ್ಮ ನಿವಾಸದಲ್ಲಿ ಸಂಕ್ರಾಂತಿ ಆಚರಿಸಿದ ಸಿಎಂ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಕಾರ್ಯಕರ್ತರು ಹಾಗೂ ಆಪ್ತರಿಗೆ ಎಳ್ಳು-ಬೆಲ್ಲ ನೀಡಿದರು. ಪ್ರತಿವರ್ಷ ಹಬ್ಬದ ಸಮಯದಲ್ಲಿ ಬೇರೆ ಕಡೆ ಇರುತ್ತಿದ್ದೆ. ಆದರೆ ಈ ಬಾರಿ ವಿಶೇಷವಾಗಿ ಶಿಕಾರಿಪುರದಲ್ಲಿಯೇ ಇದ್ದು ಹಬ್ಬ ಆಚರಿಸುತ್ತಿದ್ದೇನೆ ಎಂದರು.
#HappyMakarSankranti #HappySankranti #ಮಕರಸಂಕ್ರಾಂತಿ #ಮಕರಸಂಕ್ರಾಂತಿಹಬ್ಬದಶುಭಾಶಯಗಳು. pic.twitter.com/GtGLtGh2lG
— B.S.Yediyurappa (@BSYBJP) January 15, 2020
ನಂತರ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಮಾರ್ಚ್ 5 ರಂದು ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ನಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಇದೇ 18 ಕ್ಕೆ ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡುತ್ತಿದ್ದು, ಈ ವೇಳೆ ಸಂಪುಟ ವಿಸ್ತರಣೆ ಕುರಿತು ಅಮಿತ್ ಶಾ ಜೊತೆ ಚರ್ಚಿಸಿ ಶೀಘ್ರವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಅಲ್ಲದೇ ಇದೇ ತಿಂಗಳು 19 ರಂದು ದಾವೋಸ್ ಗೆ ಪ್ರಯಾಣ ಮಾಡಲಿದ್ದು, ಇನ್ ವೆಸ್ಟರ್ ಮೀಟ್ ನಲ್ಲಿ ಭಾಗವಹಿಸುತ್ತಿದ್ದೇನೆ. ಅಲ್ಲದೇ ಇದೇ ವೇಳೆ ನಿನ್ನೆ ನಡೆದ ಘಟನೆ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ಯಡಿಯೂರಪ್ಪ ನಿರಾಕರಿಸಿದರು.