ನೆಲಮಂಗಲ: ಮುಡಾ ಹಗರಣದಲ್ಲಿ (MUDA Scam) ಸಿಎಂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಸೋಂಪುರ ಹೋಬಳಿಯ ಸಮಾಧಾನ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಡಾ ಹಗರಣ, ವಾಲ್ಮೀಕಿ ಹಗರಣದಿಂದ (Valmiki Scam) ರಾಜ್ಯದ ಜನತೆಗೆ ಅನ್ಯಾಯವಾಗಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅನಿವಾರ್ಯತೆ ಬಂದಾಗಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮೈಸೂರಿಗೆ ಮೊದಲನೇ ಪಾದಯಾತ್ರೆ ಯಶಸ್ವಿಯಾಗಿದೆ. ಸದ್ಯ ಎರಡನೇ ಪಾದಯಾತ್ರೆ ಬಗ್ಗೆ ಚರ್ಚೆಯಾಗಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಬಾಹ್ಯಾಕಾಶ ನಿಲ್ದಾಣ ತಲುಪಿತು ಕ್ರ್ಯೂ-9 ಮಿಷನ್ – ಅಪ್ಪಿಕೊಂಡು ಸ್ವಾಗತಿಸಿದ ಗಗನಯಾನಿಗಳು
Advertisement
Advertisement
ಈ ಎರಡು ಹಗರಣಗಳು ಸಿಬಿಐಯಿಂದ (CBI) ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ವರಿಷ್ಠ ಮಲ್ಲಿಕಾರ್ಜುನ ಖರ್ಗೆಯವರೇ (Mallikarjuna Kharge) ಈ ಹಗರಣದ ಬಗ್ಗೆ ಮಾತಾಡಿದ್ದಾರೆ. ಸಿಎಂ ಸಿದ್ದರಾಮಯ್ಯರ ರಾಜೀನಾಮೆ ಅನಿವಾರ್ಯವಾಗಿದೆ ಎಂದರು.
Advertisement
ಬಿಜೆಪಿ (BJP) ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಮಾತನಾಡಿದ ಅವರು, ಬಸವನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಪ್ರತ್ಯೇಕ ಸಭೆ ಹಿನ್ನಲೆಯಾಗಿ ತಿಳಿಸಿದರು. ಈ ಸಭೆ ಹೊಸದೇನಲ್ಲ. ನಮ್ಮ ತಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ (Former Chief Minister Yadiyurappa) ಅನೇಕ ಸವಾಲುಗಳನ್ನು ನೋಡಿ ಬೆಳೆದಿದ್ದೇನೆ. ಹೀಗಾಗಿ ಎಲ್ಲಾ ಸವಾಲನ್ನು ಯಶಸ್ವಿಯಾಗಿ ಎದುರಿಸುತ್ತೇನೆ. ಸಮಸ್ಯೆಯಿಂದ ಓಡಿ ಹೋಗುವುದಲ್ಲ. ಜೀವನದಲ್ಲಿ ಸಮಸ್ಯೆ ಇದ್ದಾಗ ವಿಶ್ವಾಸ ಹೆಚ್ಚಾಗುತ್ತದೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
ಇದೇ ವೇಳೆ ನಿರ್ಮಲಾ ಸೀತಾರಾಮನ್ (Nirmala Sitharaman) ಎಫ್‌ಎಆರ್ (FIR) ವಿಚಾರವಾಗಿ ಮಾತನಾಡಿ, ರಾಜ್ಯ ಸರ್ಕಾರ ತರಾತುರಿಯಲ್ಲಿ ಕೇಂದ್ರ ಹಣಕಾಸು ಸಚಿವೆ ಮೇಲೆ ಎಫ್‌ಎಆರ್ ದಾಖಲು ಮಾಡಿದೆ. ಎಲೆಕ್ಟ್ರಾಲ್ ಬಾಂಡ್ ಬಗ್ಗೆ ಕೇಳ ನ್ಯಾಯಲಾಯ ಆದೇಶ ಮಾಡಿದೆ. ರಾಜ್ಯ ಸರ್ಕಾರ ಎಲ್ಲವನ್ನೂ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಬೆಂಗಳೂರಿಗರೇ ಹುಷಾರಾಗಿರಿ, ಮಾತನಾಡಿಕೊಂಡು ಹೋಗ್ತಿದ್ದಾಗಲೇ ಮೊಬೈಲ್ ಕಳ್ಳತನ – ರಸ್ತೆಗೆ ಬಿದ್ದ ಡೆಲಿವರಿ ಬಾಯ್