Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ವಿಚಾರದಲ್ಲಿ ವರಸೆ ಬದಲಿಸಿದ ಸಿಎಂ – ಜೋಶಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಧರ್ಮಸ್ಥಳ ವಿಚಾರದಲ್ಲಿ ವರಸೆ ಬದಲಿಸಿದ ಸಿಎಂ – ಜೋಶಿ ಆರೋಪ

Latest

ಧರ್ಮಸ್ಥಳ ವಿಚಾರದಲ್ಲಿ ವರಸೆ ಬದಲಿಸಿದ ಸಿಎಂ – ಜೋಶಿ ಆರೋಪ

Public TV
Last updated: August 13, 2025 3:30 pm
Public TV
Share
2 Min Read
Pralhad Joshi 2
SHARE

ನವದೆಹಲಿ: ಧರ್ಮಸ್ಥಳ ವಿಚಾರದಲ್ಲಿ (Dharmasthala Mass Burials) ಸೂಕ್ಷ್ಮವಾಗಿ ವರ್ತಿಸಬೇಕಿದ್ದ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಏನೊಂದೂ ಸಿಗದಿದ್ದಕ್ಕೆ ಸಿಎಂ ಈಗ ವರಸೆ ಬದಲಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಿಎಲ್‌ಪಿ ಸಭೆಯಲ್ಲಿ ‘ಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎಂದಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವರು, ಎಸ್‌ಐಟಿ (SIT) ರಚಿಸಿದ್ದು ತಾವೇ ಅಲ್ಲವೇ? ಎಂದು ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಿ: ರೇಣುಕಾಚಾರ್ಯ

Siddaramaiah 10

ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ ಸಿಎಂ ಈಗ ಸರ್ಕಾರದ ಪಾತ್ರವಿಲ್ಲವೆಂದು ಉಲ್ಟಾ ಹೊಡೆಯುತ್ತಿದ್ದಾರೆ. ಪರ-ವಿರೋಧ ಚರ್ಚೆಯ ನಡುವೆಯೇ ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಉತ್ಖನನಕ್ಕೆ ಆದೇಶ ನೀಡಿದ್ದು ತಾವೇ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಾಣಿಕ್ ಷಾ ಪರೇಡ್ ಗ್ರೌಂಡ್‌ನಲ್ಲಿ ಸ್ವಾತಂತ್ರ‍್ಯ ದಿನಾಚರಣೆಗೆ ಸಿದ್ಧತೆ – ಗ್ಯಾರಂಟಿ ಸ್ಕೀಮ್‌ಗಳ ಬಗ್ಗೆ ಪ್ರದರ್ಶನ

ಮಣ್ಣು ಅಗೆದಿದ್ದೊಂದೇ ಬಂತು!
ಧರ್ಮಸ್ಥಳದ 13 ಉತ್ಖನನ ಮಾಡಿದ ಜಾಗಗಳಲ್ಲಿ ಈವರೆಗೂ ಮಣ್ಣು ಅಗೆದಿದ್ದೊಂದೇ ಬಂತು. ಅನಾಮಿಕ ಆರೋಪಿಸಿದಂತೆ ಏನೊಂದೂ ಗುರುತರ ಸಾಕ್ಷಿ, ಶವಗಳ ಅವಶೇಷ ಸಿಗದಾಯಿತು. ಹೀಗಾಗಿ ಸಿಎಂ ಈಗ ತಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆಂಬ ಕಾರಣಕ್ಕೆ ‘ಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎನ್ನುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಭಾರತೀಯ ಪ್ರಜೆಯಾಗದೇ ಮತದಾರರ ಪಟ್ಟಿಯಲ್ಲಿ ಸೋನಿಯ ಗಾಂಧಿ ಸೇರ್ಪಡೆ; ಮತಗಳವು ಆರೋಪಕ್ಕೆ ಬಿಜೆಪಿ ಪ್ರತ್ಯಾರೋಪ

ಸಿಎಂ ಪಾತ್ರವಿಲ್ಲದೆ ಎಸ್‌ಐಟಿ ರಚನೆ ಆಯಿತಾ?
ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಪಾತ್ರವಿಲ್ಲದೆ ಎಸ್‌ಐಟಿ ರಚಿಸಲಾಯಿತೆ? ಎಂದು ಪ್ರಶ್ನಿಸಿದ ಜೋಶಿ, ಇಷ್ಟೆಲ್ಲಾ ಹೈಡ್ರಾಮಾ ಮಾಡುವ ಬದಲು ಸರಿಯಾಗಿ ಪೊಲೀಸ್ ತನಿಖೆ ನಡೆಸಬಹುದಿತ್ತು. ಆದರೆ ಅದೇನೋ ಅಗೆದು ಗುಡ್ಡೆ ಹಾಕುವ ಕೆಲಸ ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದಾರೆ. ಇದನ್ನೂ ಓದಿ: ಬೀದಿ ನಾಯಿಗಳನ್ನು ಆಶ್ರಯ ತಾಣಕ್ಕೆ ಸೇರಿಸೋ ತೀರ್ಪನ್ನು ಪರಿಶೀಲಿಸುತ್ತೇನೆ: ಸಿಜೆಐ

ಧರ್ಮಸ್ಥಳಕ್ಕೆ ತಲೆಮಾರಿನ ಇತಿಹಾಸವಿದೆ. ಈ ಪವಿತ್ರ ಕ್ಷೇತ್ರಕ್ಕೆ ಪ್ರತಿ ದಿನ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಆದರೆ ರಾಜ್ಯ ಸರ್ಕಾರ ಜನರ ನಂಬಿಕೆ ವಿಚಾರದಲ್ಲಿ ಆಟವಾಡುತ್ತಿದೆ. ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದು, ತೀವ್ರ ಖಂಡನೀಯ ಎಂದಿದ್ದಾರೆ. ಇದನ್ನೂ ಓದಿ: ಆ.14ರಿಂದ ವೈದ್ಯಕೀಯ ಪ್ರವೇಶ ಆರಂಭ- ಕೆಇಎ

ದಟ್ಟಾರಣ್ಯ ಪ್ರದೇಶದ ನೇತ್ರಾವತಿ ಸ್ನಾನಘಟ್ಟದ 13 ಭಾಗಗಳಲ್ಲಿ ಶವಗಳನ್ನು ಹೂತು ಹಾಕಿದೆ ಎಂದಿರುವ ಅನಾಮಿಕನ ಆರೋಪದ ಬಗ್ಗೆ ಪರ-ವಿರೋಧ ಚರ್ಚೆ ನಡುವೆಯೇ ಎಸ್‌ಐಟಿ ರಚಿಸಿ, ಈಗ ಉತ್ಖನನ ಜಾಗದಲ್ಲಿ ಏನೂ ಸಿಗದಿದ್ದರಿಂದ ‘ಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎನ್ನುತ್ತಿರುವುದು ನಿಜಕ್ಕೂ ದುರಂತ ಹಾಗೂ ಖಂಡನೀಯ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಯುಪಿ| ಅಂಗವಿಕಲ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌; 24 ಗಂಟೆಯೊಳಗೆ ಆರೋಪಿಗಳ ಕಾಲಿಗೆ ಗುಂಡೇಟು

TAGGED:Dharmasthala Mass BurialsNew DelhiPralhad Joshisiddaramaiahsitಎಸ್‍ಐಟಿಧರ್ಮಸ್ಥಳನವದೆಹಲಿಪ್ರಹ್ಲಾದ್ ಜೋಶಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Right to Information
Latest

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್

Public TV
By Public TV
23 minutes ago
kalaburagi meeting
Kalaburagi

ಕಲಬುರಗಿಯಲ್ಲಿ ಹಿಟ್ ‍& ರನ್ ಅಪಘಾತ ಪ್ರಕರಣಗಳಲ್ಲಿ 26 ಸಂತ್ರಸ್ತರಿಗೆ ಪರಿಹಾರ ಧನ ಮಂಜೂರು

Public TV
By Public TV
2 hours ago
H.D Kumaraswamy
Davanagere

ಗ್ಯಾಸ್ ಅಭಾವ – ಆಟೋ ಚಾಲಕರಿಗೆ ಸಣ್ಣಪುಟ್ಟ ಸಮಸ್ಯೆಯಾಗಿದೆ, ಮೋದಿ ದೊಡ್ಡ ಡ್ಯಾಮೇಜ್‌ ತಪ್ಪಿಸಿದ್ದಾರೆ: ಹೆಚ್‌ಡಿಕೆ

Public TV
By Public TV
2 hours ago
Pakistan UAE
Latest

ಇರಾನ್‌ ಯುದ್ಧ; 18,548 ಕೋಟಿ ಸಾಲ ವಾಪಸ್‌ ಕೊಡುವಂತೆ ಪಾಕಿಸ್ತಾನಕ್ಕೆ ಯುಎಇ ಒತ್ತಾಯ

Public TV
By Public TV
2 hours ago
Sameer Rizvi Delhi Capitals
Cricket

ಸಮೀರ್‌ ರಿಜ್ವಿ ಬ್ಯಾಟಿಂಗ್‌ ಅಬ್ಬರಕ್ಕೆ ಮುಂಬೈ ತತ್ತರ; ಡೆಲ್ಲಿಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Pink Elephant
Latest

ಜೈಪುರದ ಪಿಂಕ್ ಆನೆ ಹೃದಯಾಘಾತದಿಂದ ಸಾವು – ಆನೆ ಸಫಾರಿ ಬ್ಯಾನ್ ಮಾಡುವಂತೆ ಪ್ರಾಣಿ ಪ್ರಿಯರ ಒತ್ತಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?