ಶಿವಮೊಗ್ಗ: ಕಸ್ತೂರಿ ರಂಗನ್ ವರದಿಯ (Kasturirangan Report) ಬಗ್ಗೆ ರೈತರ ಜೊತೆ ಚರ್ಚಿಸಲು ಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರು ಸೆ.19 ರಂದು ತೀರ್ಥಹಳ್ಳಿಗೆ (Thirthahalli) ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಅಲ್ಲಿನ ಮೂರು ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಯು.ಆರ್.ಅನಂತಮೂರ್ತಿ ಪ್ರೌಢ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೇ ಬಾಳೇಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೂ ರಜೆ ಘೋಷಣೆ ಮಾಡಿ ತಹಶಿಲ್ದಾರ್ ರಂಜಿತ್ ಅವರು ಆದೇಶಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕನ ಮಾತು ಕೇಳಿ ಪ್ರೋಟೋಕಾಲ್ ಉಲ್ಲಂಘನೆ: ಬೀದರ್ ಡಿಎಚ್‌ಒ, ಟಿಎಚ್‌ಒ ಅಮಾನತು
ಸಿಎಂ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಇದರಿಂದ ವಾಹನ ಸಂಚಾರ ಹೆಚ್ಚಾಗಲಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ 2 ಕಾಲೇಜು ಹಾಗೂ 1 ಪ್ರೌಢಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ: ಕರಾವಳಿಗೆ ಬಂಪರ್ ಘೋಷಣೆಗಳ ನಿರೀಕ್ಷೆ

