ಮೈಸೂರು: ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ (CM D K Shivakumar) ಅವರು ಇಂದು ಮೈಸೂರು (Mysuru) ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರ ಆಗಮನದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಕಾರಂಜಿ ಕೆರೆ ವೃತ್ತದಿಂದ ಕುರುಬಾರಹಳ್ಳಿ ವೃತ್ತದವರೆಗೆ ಸಿಎಂ ಡಿ.ಕೆ. ಶಿವಕುಮಾರ್ ಅವರ ಮೆರವಣಿಗೆ ನಡೆಯಲಿದ್ದು, ವಿವಿಧ ಕಲಾ ತಂಡಗಳು ಭಾಗವಹಿಸಲಿವೆ. ರಸ್ತೆಯುದ್ದಕ್ಕೂ ಮರದ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ನಗರದ ಹಲವೆಡೆ ಡಿಕೆಶಿ ಅವರ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ಇದನ್ನೂ ಓದಿ: ಮೈಸೂರಿಗೆ ಮೋದಿ ಆಗಮನ – ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ
.ಕೆ. ಶಿವಕುಮಾರ್ ಅವರ ಶಕ್ತಿ ಪ್ರದರ್ಶನಕ್ಕೂ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಿದ್ದಾರೆ. ಮುಖ್ಯಮಂತ್ರಿಗೆ ಕ್ರೇನ್ ಮೂಲಕ ಹಾರ ಹಾಕಿ ಸ್ವಾಗತಿಸುವ ಯೋಜನೆಯೂ ಇದೆ. ವೀಳ್ಯದ ಎಲೆ, ಮಲ್ಲಿಗೆ ಹೂ ಹಾಗೂ ತಾವರೆ ಹೂಗಳಿಂದ ವಿಶೇಷ ಹಾರವನ್ನು ಅಭಿಮಾನಿಗಳು ಸಿದ್ಧಪಡಿಸಿದ್ದಾರೆ.
ಮೆರವಣಿಗೆ ಬಳಿಕ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿಯವರ ಭೇಟಿ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.ಇದನ್ನೂ ಓದಿ: ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚು ಗೆದ್ದ ತೇಜಸ್ವಿನ್ – ಮತ್ತೊಂದು ಇತಿಹಾಸ
