ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಕನ್ನಡ ಸುದ್ದಿವಾಹಿನಿ ಪಬ್ಲಿಕ್ ಟಿವಿ (Public TV) ಕಚೇರಿಗೆ ಭೇಟಿ ನೀಡಿದ್ದಾರೆ. ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ (H.R.Ranganath) ಅವರು ಸಿಎಂ ಡಿಕೆಶಿ ಸಂದರ್ಶನ ನಡೆಸಲಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಿ ಅಧಿಕಾರಕ್ಕೇರಿದ ಬಳಿಕ ಪಬ್ಲಿಕ್ ಟಿವಿಯಲ್ಲಿ ಇದೇ ಮೊದಲ ಬಾರಿಗೆ ಸಂದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಬೆಂಗಳೂರಿನ ಪಬ್ಲಿಕ್ ಟಿವಿ ಕಚೇರಿಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಹೂಗುಚ್ಛ ನೀಡಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ಅವರು ಆತ್ಮೀಯ ಸ್ವಾಗತ ಕೋರಿದರು. ಸಂದರ್ಶನಕ್ಕೆ ಒಪ್ಪಿ ಬಂದಿದ್ದಕ್ಕೆ ಧನ್ಯವಾದ ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರವು ಸೆಪ್ಟೆಂಬರ್‌ಗೆ 100 ದಿನಗಳ ಆಡಳಿತವನ್ನು ಪೂರೈಸಿದೆ. ಈ ಸಂದರ್ಭದಲ್ಲಿ ವಿಧಾನಸೌಧದಲ್ಲಿ ‘ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ‘ಕರ್ನಾಟಕ ಮಾದರಿ’ಯಡಿ ಹಲವಾರು ಜನಪರ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಘೋಷಿಸಲಾಯಿತು.

