ಬೆಂಗಳೂರು: ತೈವಾನ್ ಮೂಲದ ಆಪಲ್ ಫೋನ್ (Apple Phone) ತಯಾರಿಸುವ ಫಾಕ್ಸ್‌ಕಾನ್ (Foxconn) ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು (Young Liu) ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚರ್ಚೆ ನಡೆಸಿದರು.
ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್‌ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದರು. ಇದನ್ನೂ ಓದಿ: ರಾಜ್ಯದ 2 ಮೆಟ್ರೋ ಕಾರಿಡಾರ್‌ಗಳಿಗೆ ಕೇಂದ್ರ ಅನುಮೋದನೆ: ಪ್ರಹ್ಲಾದ್ ಜೋಶಿ
Advertisement
Advertisement
ಡಿಸಿಎಂ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಭೋಜನ ಕೂಟದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: TB Dam| ಮೊದಲ ಎಲಿಮೆಂಟ್ ಅಳವಡಿಸುವ ಕಾರ್ಯ ಯಶಸ್ವಿ
Advertisement
Advertisement
ಫಾಕ್ಸ್ಕಾನ್ ಕಂಪನಿಗೆ ದೇವನಹಳ್ಳಿ ತಾಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ 300 ಎಕರೆ ಜಾಗ ಮಂಜೂರಾಗಿದ್ದು, ರಾಜ್ಯದಲ್ಲಿ ದೊಡ್ಡ ಮಟ್ಟದ ಹೂಡಿಕೆಗೆ ಮುಂದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಜವಾಹರಲಾಲ್ ನೆಹರು ತಾರಾಲಯ ಆಧುನಿಕರಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ: ಬೋಸರಾಜು ಸೂಚನೆ