– ಕೇಸ್ ಮುಚ್ಚಿ ಹಾಕಲು ಅವಕಾಶ ಕೊಡಲ್ಲ ಎಂದ ಸ್ನೇಹಮಯಿ
ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಬಿಗ್ ರಿಲೀಫ್ ನಿರೀಕ್ಷೆಯಲ್ಲಿದ್ದ ಸಿಎಂ ಸಿದ್ಗೆದರಾಮಯ್ಯಗೆ (Siddaramaiah) ನಿರಾಸೆಯಾಗಿದೆ. ತನಿಖೆ ಮುಂದುವರಿಸಿ, ಅಂತಿಮ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಸಿಎಂ ವಿರುದ್ಧದ ಬಿ ರಿಪೋರ್ಟ್ ವಿರೋಧಿಸಿ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಮತ್ತು ಇಡಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ, ಆದೇಶ ಕಾಯ್ದಿರಿಸಿದ್ದ ನ್ಯಾಯಾಲಯ ಅಂತಿಮ ವರದಿ ಬಳಿಕ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಮಾಡುವುದಾಗಿ ಹೇಳಿದೆ. ತನಿಖೆ ಮುಂದುವರಿಸಲು ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಪುರಸ್ಕರಿಸಿದ್ದಾರೆ. ಇದನ್ನೂ ಓದಿ: ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ಸಾಧ್ಯತೆ – ಮುಂಗಾರು ಮಳೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ
ಆದೇಶದ ಬಳಿಕ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಅವರು, ಲೋಕಾ ಅಧಿಕಾರಿಗಳು ಸಿಎಂ ಕುಟುಂಬವನ್ನ ರಕ್ಷಣೆ ಮಾಡುವುದಕ್ಕೆ ತನಿಖೆ ಪೂರ್ಣಗೊಳಿಸದೇ ವರದಿ ಸಲ್ಲಿಕೆ ಮಾಡಿದ್ದರು. ಹಾಗಾಗಿ ಕೋರ್ಟ್ ಅಂತಿಮ ವರದಿಯನ್ನ ಸಲ್ಲಿಸಲು ಕೋರ್ಟ್ ಸೂಚಿಸಿದೆ ಎಂದಿದ್ದಾರೆ. ಇದನ್ನೂ ಓದಿ: ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಿಗೆ ಕೂಡಲೇ ಅಮಾನತುಗೊಳಿಸಿ: ಸುಪ್ರೀಂ
ತನಿಖಾಧಿಕಾರಿಗಳಿಗೆ ತನಿಖೆಯ ಬಗ್ಗೆ ತಿಳಿದಿಲ್ಲ. ಮಾನ್ಯ ನ್ಯಾಯಾಲಯದ ಇಂದಿನ ಆದೇಶದಲ್ಲಿ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಸಿಎಂ ಅಧಿಕಾರ ದುರುಪಯೋಗಪಡಿಸಿಕೊಂಡು ಕೇಸ್ ಮುಚ್ಚಿ ಹಾಕುವ ಪ್ರಯತ್ನಕ್ಕೆ ನಾನು ಅವಕಾಶ ಕೊಡಲ್ಲ ಎಂದು ಹೇಳಿದ್ದಾರೆ.