ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲಕ್ಕೆ ಇಂದು (ಸೆ.30) ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಭೇಟಿ ನೀಡಲಿದ್ದು, 1,500 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ ಅವರು ಮೊದಲ ಬಾರಿಗೆ ಚಾಮರಾಜನಗರ (Chamarajanagar) ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಹನೂರು (Hanuru) ಹಾಗೂ ಕೊಳ್ಳೇಗಾಲ (Kollegala) ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಮತ್ತೆ ಸುರಿದ ಮಳೆ
ಮ.12ಗಂಟೆಗೆ ಹನೂರು ತಾಲೂಕಿನ ಹುಲಸಗುಡ್ಡ ಹೆಲಿಪ್ಯಾಡ್‌ಗೆ ಸಿಎಂ ಬಂದಿಳಿಯಲಿದ್ದು, ಅಲ್ಲಿಂದ 12:20ಕ್ಕೆ ಎಂ.ಜಿ.ಎಸ್.ವಿ. ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಆಗಮಿಸಲಿದ್ದಾರೆ. ಅಲ್ಲಿ 1,500 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ.
ಕೊಳ್ಳೇಗಾಲದಲ್ಲಿ ಜಿಲ್ಲಾಮಟ್ಟದ ಸರ್ಕಾರಿ ಆಸ್ಪತ್ರೆ ಮೊದಲ ಹಂತದ ಕಾಮಗಾರಿ, ಗರ ಮಾಂಬಳ್ಳಿ ಕೆರೆಗಳಿಂದ ಬೆಂಗಳೂರು ದಾಬಸ್‌ಪೇಟೆ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಕೆ, ಮುಡಿಗುಂಡಂ ಸೇತುವೆ, ಯಳಂದೂರು ಸರ್ಕಾರಿ ಪದವಿ ಕಾಲೇಜು ಕಟ್ಟಡ, ಹೊಂಗನೂರು ಹಿರಿಕೆರೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೊತೆಗೆ 100 ಹಾಸಿಗೆಗಳ ಯಳಂದೂರು ಸರ್ಕಾರಿ ಆಸ್ಪತ್ರೆ, ಕೊಳ್ಳೇಗಾಲದ ಅಂಬೇಡ್ಕರ್ ಭವನ, ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಸರ್ಕಾರಿ ಐಟಿಐ ಕಾಲೇಜು ಹೆಚ್ಚುವರಿ ಕೊಠಡಿಗಳು ಮತ್ತಿತರ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ.
ಕೊಳ್ಳೇಗಾಲದ ಎಂಜಿಎಸ್‌ವಿ ಕಾಲೇಜು ಮೈದಾನದಲ್ಲಿ ಸಮಾರಂಭ ನಡೆಯಲಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಮೈಸೂರಲ್ಲಿ ಕರಾವಳಿ ಗತವೈಭವ – ಈ ಬಾರಿ ದಸರಾದಲ್ಲಿ ಕಂಬಳದ ಅಬ್ಬರ!

