– ರಾಜ್ಯದ, ರೈತರ ಹಿತಕ್ಕಾಗಿ ಸಂಘಟನೆಗಳ ಬೇಡಿಕೆ ಪರಿಶೀಲಿಸುವೆ; ಭರವಸೆ
ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳುʼ ಎಂದು ಸಿಎಂ ಡಿ.ಕೆ ಶಿವಕುಮಾರ್ (DK Sivakumar) ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರಿಂದು ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್ (Karnataka Bandh) ಹಿಂಪಡೆದ ಬಗ್ಗೆ ಮಾತನಾಡಿದರು. ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ತಮ್ಮನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಹಲವು ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ – ಎಂದಿನಂತೆ ಜನಜೀವನ, ಕರ್ನಾಟಕ ಬಂದ್‌ಗೆ ಸಿಗದ ಜನ ಬೆಂʼಬಲʼ
ʻರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆʼ ಎಂದು ತಿಳಿಸಿದರು. ಇದನ್ನೂ ಓದಿ: ಹೊರ ಬರಲ್ಲ ಎಂದು ಹಠ ಹಿಡಿದ ವಾಟಾಳ್ ಮನೆಯಂಗಳದಲ್ಲೇ ವಶ

