– ದೆಹಲಿಯಲ್ಲಿ ಈ ಪ್ರಮಾಣ ಭದ್ರತೆ ರಾಜ್ಯದ ಯಾವ ಸಿಎಂಗೂ ಇರಲಿಲ್ಲ
ನವದೆಹಲಿ: ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರ ದೆಹಲಿ ಭೇಟಿಗೆ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಂಗಳೂರಿನಿಂದ (Bengaluru) ಆಗಮಿಸಿದ 7 ಮಂದಿ ಪೊಲೀಸರ ವಿಶೇಷ ತಂಡವು ಅವರ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದು, ಎಸ್‌ಪಿ, ಇನ್ಸ್‌ಪೆಕ್ಟರ್ ಸೇರಿದಂತೆ ಹಲವು ಹಂತದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಗದ್ದಲ ಕೋಲಾಹಲದ ನಡುವೆ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಮಂಡನೆ

ರಾಜ್ಯದ ಯಾವುದೇ ಮುಖ್ಯಮಂತ್ರಿಗೆ ಈ ಹಿಂದೆ ದೆಹಲಿಯಲ್ಲಿ ಇಷ್ಟೊಂದು ಮಟ್ಟದ ವಿಶೇಷ ಭದ್ರತೆ ಒದಗಿಸಲಾಗಿರಲಿಲ್ಲ. ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಕಟ್ಟುನಿಟ್ಟಿನ ಭದ್ರತೆಯೊಂದಿಗೆ ಸಂಚರಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಪ್ರತಿಭಟನೆ ನಡೆಸಿದ ಮಾತ್ರಕ್ಕೆ ಲಾಠಿಚಾರ್ಜ್ ಮಾಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಇನ್ನೂ ಸಂಸದರ ಸಭೆಗೆ ಮುನ್ನ ದೆಹಲಿ ಕರ್ನಾಟಕ ಭವನದಲ್ಲಿ (Delhi Karnataka Bhavan) ಪೂರ್ವಭಾವಿ ಸಭೆ ನಡೆಸಲಾಗುತ್ತಿದ್ದು, ರಾಜ್ಯದ ಜಲ ಹಿತಾಸಕ್ತಿ, ನ್ಯಾಯಮಂಡಳಿ ವಿಚಾರಗಳು ಹಾಗೂ ಮುಂದಿನ ಕಾರ್ಯತಂತ್ರದ ಕುರಿತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ ನಡೆಸುತ್ತಿದ್ದಾರೆ.
ಕರ್ನಾಟಕಕ್ಕೆ ಸಂಬಂಧಿಸಿದ ಜಲ ವಿವಾದಗಳ ಕುರಿತೂ ಸಿಎಂ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
