ಬೆಂಗಳೂರು: ಸಚಿನ್ ಬರೆದಿಟ್ಟ 7 ಪುಟಗಳ ಡೆತ್ ನೋಟಿನಲ್ಲಿ 2-3 ಬಾರಿ ಪ್ರಿಯಾಂಕ್ ಖರ್ಗೆಯವರ (Priyank Kharge) ಹೆಸರು ಪ್ರಸ್ತಾಪವಾಗಿದೆ. ಜೊತೆಗೆ ಎಫ್‌ಎಸ್‌ಎಲ್ ವರದಿಯಲ್ಲೂ ಡೆತ್ ನೋಟ್ ಅಸಲಿ ಎಂದು ದೃಢಪಟ್ಟಿದೆ. ದಾಖಲೆ ಕೊಡಿ ಎಂದರೆ ಇನ್ನೇನು ದಾಖಲೆ ಬೇಕು ನಿಮಗೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಪ್ರಶ್ನಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾಖಲೆ ಇಲ್ಲದ ಕಾರಣ ಸಚಿವ ಸ್ಥಾನದಿಂದ ಕೈಬಿಡುವ ವಿಚಾರ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು (Siddaramaiah) ಹೇಳಿದ್ದಾರೆ. ಮುಖ್ಯಮಂತ್ರಿಗಳೇ ಇದು ನಮಗೆ ಮೊದಲೇ ಗೊತ್ತಿದೆ. ನಿಮಗೆ ಧೈರ್ಯ ಇಲ್ಲ ಎಂಬುದು ನಮಗೆ ಗೊತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಮೊದಲ ಕ್ಯಾಬಿನೆಟ್ ರೈತರಿಗೆ ಅರ್ಪಿಸಿದ ಮೋದಿ – ಡಿಎಪಿ ಗೊಬ್ಬರಕ್ಕೆ ಸಬ್ಸಿಡಿ
Advertisement
Advertisement
ಆ ಸಚಿವರ ತಂದೆಯವರು ಎಐಸಿಸಿ ಅಧ್ಯಕ್ಷರು. ನೀವು ಇದಕ್ಕೆ ಕೈ ಹಾಕಿದರೆ ಅವರು ನಿಮ್ಮ ಬುಡಕ್ಕೆ ಕೈ ಹಾಕುವ ಭಯ ನಿಮಗಿದೆ. ನೀವು ಕುರ್ಚಿಗೆ ಅಂಟಿ ಕುಳಿತವರು. ಇಷ್ಟೊತ್ತಿಗೆ ನೀವು ಅವರನ್ನು ವಜಾ ಮಾಡಬೇಕಿತ್ತು, ರಾಜೀನಾಮೆ ಪಡೆಯಬೇಕಾಗಿತ್ತು. ಬೇರೆ ಸರ್ಕಾರವಿದ್ದಾಗ ಸ್ವಲ್ಪ ಬಂದರೂ ಬೀದಿಗಿಳಿದು ಬೆಂಕಿ ಹಚ್ಚುತ್ತೀರಲ್ಲವೇ? ಈಗ ನಿಮ್ಮನ್ನು ತಡೆದೋರ‍್ಯಾರು ಎಂದು ಕಿಡಿಕಾರಿದರು. ಇದನ್ನೂ ಓದಿ: ಶಿವಮೊಗ್ಗ| ಪತಿಯ ಸಾವಿನ ಸುದ್ದಿ ತಿಳಿದು ಪತ್ನಿ ನೇಣಿಗೆ ಶರಣು
Advertisement
Advertisement
ಬೇರೆಯವರಿಗೆ ಒಂದು ನ್ಯಾಯ, ನಿಮಗೆ ಒಂದು ನ್ಯಾಯ ಇದೆಯೇ? ಇಷ್ಟೊತ್ತಿಗೆ ನೀವು ಅವರನ್ನು ಸಂಪುಟದಿಂದ ವಜಾ ಮಾಡಬೇಕಿತ್ತು. ನಿಮಗೆ ತಾಕತ್ತಿಲ್ಲವೆಂದು ನೇರವಾಗಿ ಒಪ್ಪಿಕೊಳ್ಳಿ. ಗೋಡೆ ಮೇಲೆ ದೀಪ ಇಡುವ ಕೆಲಸ ಮಾಡಬೇಡಿ. ನಾವು ಯಾವುದೇ ಕಾರಣಕ್ಕೂ ಈ ಹೋರಾಟವನ್ನು ಕೈಬಿಡುವುದಿಲ್ಲ. ಅದು ಬೀದರ್, ಕಲಬುರಗಿಗೆ ಸೀಮಿತವಾಗಿತ್ತು. ನಿಮ್ಮ ಉದ್ಧಟತನದಿಂದ ನೀವು ಮಾಡುತ್ತಿರುವ ಈ ಕಾರ್ಯದಿಂದ ಇಡೀ ರಾಜ್ಯ, ದೇಶಕ್ಕೆ ಈ ಸಮಸ್ಯೆ ದೊಡ್ಡದಾಗಿ ಉದ್ಭವಿಸಿದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಸಕಲ ಸೇನಾ ಗೌರವದೊಂದಿಗೆ ಹುಟ್ಟೂರಲ್ಲಿ ಹುತಾತ್ಮ ಯೋಧ ದಿವಿನ್ ಅಂತ್ಯಕ್ರಿಯೆ
ಯಾವುದೇ ಕಾರಣಕ್ಕೂ ನಾವು ನಮ್ಮ ಬಟ್ಟೆ ಹರಿದುಕೊಳ್ಳುವುದಿಲ್ಲ. ಅವರವರ ಬಟ್ಟೆ ಹರಿದುಕೊಳ್ಳುವವರನ್ನು ಹುಚ್ಚರು ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಯುಎಸ್‌ನಲ್ಲಿ ಕಾರು ಹರಿದು 10 ಮಂದಿ ಸಾವು – 35ಕ್ಕೂ ಹೆಚ್ಚು ಮಂದಿಗೆ ಗಾಯ