ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ (Kho Kho World Cup) ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ.
ಇದೇ ವೇಳೆ ಎರಡೂ ವಿಭಾಗದಲ್ಲಿ ಭಾರತ ವಿಶ್ವ ಚಾಂಪಿಯನ್ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರಿನ ತಿ.ನರಸೀಪುರದ ಕುರುಬೂರಿನ ಚೈತ್ರಾ (Chaitra) ಅವರನ್ನು ಸರ್ಕಾರ ಗೌರವಿಸಿತು. ಇದನ್ನೂ ಓದಿ: Kho Kho World Cup | ಭಾರತಕ್ಕೆ ಡಬಲ್ ಧಮಾಕ – ಮಹಿಳೆಯರು, ಪುರುಷರ ತಂಡಕ್ಕೆ ಖೋ ಖೋ ವಿಶ್ವಕಪ್ ಕಿರೀಟ
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಬಹುಮಾನ ಸಹ ಘೋಷಿಸಿದರು. ಇದನ್ನೂ ಓದಿ: ಖೋ ಖೋ ವಿಶ್ವಕಪ್; ಎಂಕೆ ಗೌತಮ್, ಚೈತ್ರಾರನ್ನು ಗೌರವಿಸಿದ ಹೆಚ್‌ಡಿಕೆ
ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಮತ್ತು ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: IPL 2025 | ಲಕ್ನೋ ಸೂಪರ್ ಜೈಂಟ್ಸ್‌ಗೆ ರಿಷಬ್ ನೂತನ ಸಾರಥಿ