ಕಲಬುರಗಿ: ಮುಖ್ಯಮಂತ್ರಿಗಳ ಎರಡನೇ ದಿನದ ಗ್ರಾಮ ವಾಸ್ತವ್ಯಕ್ಕೆ ವರುಣನ ಅಡ್ಡಿಯಾಗಿದೆ. ಹೀಗಾಗಿ ಕಲಬುರಗಿಯ ಅಫಜಲಪುರ ತಾಲೂಕಿನ ಹೆರೂರು(ಬಿ) ಗ್ರಾಮ ಇಂದಿನ ವಾಸ್ತವ್ಯ ಭಾರೀ ಮಳೆಯಿಂದ ರದ್ದಾಗಿದೆ.
ಸುಮಾರು 13 ವರ್ಷಗಳ ಬಳಿಕ ಸಿಎಂ ಕೈಗೊಂಡ ಮೊದಲ ದಿನದ ಗ್ರಾಮವಾಸ್ತವ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸಿಎಂ ಗ್ರಾಮವಾಸ್ತವ್ಯದ ಕಾರಣ ಇಡೀ ಚಂಡರಕಿ ಗ್ರಾಮ ಮದುವಣಗಿತ್ತಿಯಂತೆ ಸಿಂಗರಿಸಲಾಗಿತ್ತು. ಚಂಡರಕಿಯಲ್ಲಿ ಜನತಾದರ್ಶನ 3 ಗಂಟೆ ತಡವಾಗಿ ಆರಂಭವಾಗಿದ್ದು, ರಾತ್ರಿ 8 ಗಂಟೆ ತನಕವೂ ಸಿಎಂ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
Advertisement
Advertisement
ಬಳಿಕ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿದರು. ನಂತರ ಮಕ್ಕಳೊಂದಿಗೆ ರಾತ್ರಿಯ ಭೋಜನ ಸವಿದರು. ರಾತ್ರಿಯ ಭೋಜನದ ಬಳಿಕ ಗ್ರಾಮಸ್ಥರು, ಶಾಲಾ ಮಕ್ಕಳ ಜೊತೆಗೆ ಫೋಟೋ ಸೆಷನ್ ಕೂಡ ನಡೆಯಿತು. ಸಿಎಂಗೆ ಶಾಲೆಯ ಕೊಠಡಿಯಲ್ಲಿ ಯಾವುದೇ ಹಾಸಿಗೆ ಇಲ್ಲದೆ ಚಾಪೆ, ದಿಂಬು, ಹೊದಿಕೆಗಳ ವ್ಯವಸ್ಥೆ ಕಲ್ಪಿಸಲಾಗಿತ್ತು.
Advertisement
ಮುಖ್ಯಮಂತ್ರಿಗಳ 2ನೇ ದಿನದ ಗ್ರಾಮವಾಸ್ತವ್ಯ ಕಲಬುರಗಿ ಜಿಲ್ಲೆ ಅಫ್ಜಲಪುರದ ಬಿ.ಹೇರೂರು ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. ಆದರೆ ರಾತ್ರಿಯಿಡೀ ಹೆರೂರಿನಲ್ಲಿ ಭಾರೀ ಮಳೆಯಾಗಿದ್ದು, ಸಿಎಂ ಜನತಾದರ್ಶನಕ್ಕಾಗಿ ಹಾಕಿದ್ದ ಪೆಂಡಾಲ್ ಹಾಳಾಗಿದೆ. ಇಂದು ಕೂಡ ಭಾರೀ ಮಳೆಯ ಮುನ್ಸೂಚನೆ ಇರೋದ್ರಿಂದ ಜಿಲ್ಲಾಡಳಿತ ಸಿಎಂ ಅವರ ಹಳ್ಳಿ ವಾಸವನ್ನು ಮುಂದೂಡಿದೆ.
Advertisement
ಅಲ್ಲದೆ ಮುಂದಿನ ಹೆರೂರು ಗ್ರಾಮದ ವಾಸ್ತವ್ಯದ ದಿನಾಂಕವನ್ನು ಸಿಎಂ ನಿಗದಿಪಡಿಸಲಿದ್ದಾರೆ. ಸದ್ಯ ಯಾದಿಗಿರಿಯ ಚಂಡರಕಿಯಲ್ಲಿರುವ ಸಿಎಂ 8 ಗಂಟೆ ಸುಮಾರಿಗೆ ಹೈದರಾಬಾದ್‍ಗೆ ತೆರಳಿ ಅಲ್ಲಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣ ಬೆಳಸಲಿದ್ದಾರೆ. ಒಟ್ಟಿನಲ್ಲಿ ದಿಢೀರನೇ ಸಿಎಂ ಗ್ರಾಮವಾಸ್ತವ್ಯ ರದ್ದಿನಿಂದಾಗಿ ಕಲಬುರಗಿಯ ಹೇರೂರು ಗ್ರಾಮಸ್ಥರಿಗೆ ನಿರಾಸೆಯಾಗಿದೆ. ಸಿಎಂ ಮುಂದಿನ ಗ್ರಾಮವಾಸ್ತವ್ಯದ ದಿನಾಂಕ ಯಾವಾಗ ನಿಗದಿಯಾಗುತ್ತೋ ಕಾದು ನೋಡಬೇಕಿದೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]