Tuesday, 11th December 2018

Recent News

ಸಿಎಂ ಆದ ಬಳಿಕ ಮೊದಲ ಬಾರಿ ಡಿಕೆಶಿ ಜೊತೆ ಎಚ್‍ಡಿಕೆ ಇಂದು ರಾಮನಗರಕ್ಕೆ ಭೇಟಿ

ರಾಮನಗರ: ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಮೊದಲ ಬಾರಿಗೆ ತಮ್ಮ ರಾಜಕೀಯ ಕರ್ಮಭೂಮಿ ರಾಮನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಸುಮಾರು 47.29 ಕೋಟಿ ವೆಚ್ಚದ ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ. ಅದರಲ್ಲೂ ಸಿಎಂ ಆದ ಬಳಿಕ ಎಚ್‍ಡಕೆ ತವರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗುತ್ತಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಕಾಮಗಾರಿ ಕುರಿತು ಚರ್ಚೆ ನಡೆಸಿ, ಸಾರ್ವಜನಿಕರ ಕುಂದುಕೊರತೆಗಳ ಸ್ವೀಕಾರ ಹಾಗೂ ಸಾರ್ವಜನಿಕ ಸಂಪರ್ಕ ಸಭೆ ನಡೆಸಲಿದ್ದಾರೆ. ಆನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ ಅಭಿವೃದ್ದಿ ಪರಿಶೀಲನ ಸಭೆ ನಡೆಸಲಿದ್ದಾರೆ. ಇನ್ನೂ ಸಿಎಂ ಎಚ್‍ಡಿ ಕುಮಾರಸ್ವಾಮಿಯವರಿಗೆ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಸಚಿವ ಡಿ.ಕೆ ಶಿವಕುಮಾರ್ ಸಾಥ್ ನೀಡಲಿದ್ದಾರೆ.

Leave a Reply

Your email address will not be published. Required fields are marked *