– ಇಂದು ಮಧ್ಯಾಹ್ನ ತುರ್ತು ಸಭೆ
ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಎಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಅನ್ನೋ ವದಂತಿ ಹರಿದಾಡುತ್ತಿದೆ.
ಕಾಂಗ್ರೆಸ್ಸಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡುವ ಪ್ರಸ್ತಾಪ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ವಲಯದಲ್ಲಿ ಈ ರೀತಿ ಸುದ್ದಿಯೊಂದು ಪಾಸ್ ಆಗುತ್ತಿದೆ. ಆದರೆ ಆಪರೇಷನ್ ಕಮಲ ತಪ್ಪಿಸಲು ಎಚ್‍ಡಿಕೆ ಸಿಎಂ ಸ್ಥಾನ ಬಿಟ್ಟು ಕೊಡುತ್ತಾರಾ ಅಥವಾ ಕೈ ಶಾಸಕರ ಅಸಮಾಧಾನ ಶಮನಕ್ಕೆ ಇಂತಹದ್ದೊಂದು ಕಠಿಣ ನಿರ್ಧಾರ ಕೈಗೊಳ್ಳುತ್ತಾರಾ ಅನ್ನೋ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿದೆ.
ದೋಸ್ತಿ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಉಂಟಾಗಿದೆ. ಈ ಮಧ್ಯೆ ಇತ್ತೀಚೆಗೆ ಕಾಂಗ್ರೆಸ್ ಶಾಸಕರು ಆಪರೇಷನ್ ಕಮಲದ ಬಗ್ಗೆ ಸುಳಿವು ಬಿಟ್ಟು ಕೊಟ್ಟಿದ್ದು, ಬಿಜೆಪಿ ಕರೆದರೆ ನೋಡೋಣ ಎಂದಿದ್ದರು. ಈ ದಿಢೀರ್ ಬೆಳವಣಿಗೆ ಬೆನ್ನಲ್ಲೇ ಸಿಎಂ ಅವರು ಮಧ್ಯಾಹ್ನ 12.30ಕ್ಕೆ ತುರ್ತಾಗಿ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಒಟ್ಟಿನಲ್ಲಿ ಇದೀಗ ತುರ್ತು ಸಂಪುಟ ಸಭೆಯಲ್ಲಿ ಸಿಎಂ ಕೈಗೊಳ್ಳುವ ನಿರ್ಧಾರವಾದ್ರೂ ಏನು ಎಂಬುದನ್ನು ಕಾದುನೋಡಬೇಕಿದೆ.