ಬೆಂಗಳೂರು: ನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಇಂದು ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಎಚ್‍ಡಿಕೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಡಿಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಬೇಗ ಗುಣಮುಖರಾಗುವಂತೆ ಹೇಳಿರುವುದಾಗಿ ತಿಳಿಸಿದ್ದಾರೆ. ಭೇಟಿ ವೇಳೆ ಸಿಎಂ ಅವರಿಗೆ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್, ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಾಥ್ ನೀಡಿದ್ದಾರೆ.
Advertisement
ಫುಡ್ ಪಾಯ್ಸನ್‍ನಿಂದ ಅನಾರೋಗ್ಯಕ್ಕೊಳಗಾಗಿ ಮೂರು ದಿನಗಳ ಹಿಂದೆ ಡಿಕೆಶಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇರಿಕೆ ಕಂಡುಬಂದಿದ್ದು, ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ.
Advertisement
Advertisement
ಏನಾಗಿತ್ತು?:
ಕಲಬುರಗಿಯಲ್ಲಿ ಪ್ರವಾಸ ಮುಗಿಸಿದ ಬಳಿಕ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಂಗಳೂರಿಗೆ ಬಂದ ಬಳಿಕ ತೀವ್ರವಾಗಿ ವಾಂತಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅಂದು ನಡೆದಿದ್ದ ಕನಕಪುರ ಕಾರ್ಯಕ್ರಮ ರದ್ದುಗೊಳಿಸಿ, ಕಗ್ಗಲೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆ ಬಳಿಕ ಸಚಿವರಿಗೆ ಕನಕಪುರದ ಸ್ವಗೃಹದಲ್ಲಿ ಐವರು ವೈದ್ಯಾಧಿಕಾರಿಗಳಿಂದ ತಪಾಸಣೆ ನಡೆಸಲಾಗಿತ್ತು.
Advertisement
ಹೈದರಾಬಾದ್ ನಿಂದ ಹೊರಟಿದ್ದ ವಿಮಾನದಲ್ಲಿ ಸ್ಯಾಂಡ್ ವಿಚ್ ತಿಂದ ಪರಿಣಾಮ ಸಚಿವರ ಆರೋಗ್ಯದಲ್ಲಿ ಏರುಪೇರಾಗಿತ್ತು ಎನ್ನಲಾಗಿತ್ತು. ಪರಿಣಾಮ ನಿತ್ರಾಣಗೊಂಡಿರುವ ಶಿವಕುಮಾರ್ ಅವರಿಗೆ ವೈದ್ಯರು ಗ್ಲುಕೋಸ್ ಹಾಕಿ, ಚಿಕಿತ್ಸೆ ನೀಡಿದ್ದರು. ಸದ್ಯ ನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
Chief Minister H D Kumaraswamy met DK Shivakumar, the Minister for Irrigation and Water Resources who is ailing from a food infection and is hospitalized, today and wished him speed recovery. pic.twitter.com/bspmQNBLf6
— CM of Karnataka (@CMofKarnataka) September 20, 2018