ನವದೆಹಲಿ: ನೀತಿ ಆಯೋಗದ ಸಭೆ ನಿಮಿತ್ತ ದೆಹಲಿಗೆ ತರೆಳಿರುವ ಸಿಎಂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಸೇರಿದಂತೆ ಅನೇಕ ನಾಯಕರನ್ನು ಭೇಟಿಯಾಗಿದ್ದಾರೆ.
ಎರಡನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾದ ನರೇಂದ್ರ ಮೋದಿ ಅವರನ್ನು ಸಿಎಂ ಸನ್ಮಾನಿಸಿದರು. ಬಳಿಕ ರಾಜ್ಯದಲ್ಲಿ ತಲೆದೂರಿರುವ ಬರ ಪರಿಸ್ಥಿತಿ, ನರೇಗಾ ಬಾಕಿ ಅನುದಾನ ಬಿಡುಗಡೆ, ಸಾಲಮನ್ನಾ ಯೋಜನೆಯ ಯಶಸ್ವಿ ಅನುಷ್ಠಾನ ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡಿದ್ದಾರೆ.
Advertisement
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರಾಜ್ಯದ ಹಲವು ವಿಷಯಗಳನ್ನು ಚರ್ಚಿಸಿದರು.
ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ, 'ನರೇಗಾ' ಬಾಕಿ ಅನುದಾನ ಬಿಡುಗಡೆ ಹಾಗೂ ಸಾಲ ಮನ್ನಾ ಯೋಜನೆಯ ಯಶಸ್ವಿ ಅನುಷ್ಠಾನದ ಕುರಿತು ಚರ್ಚಿಸಿದರು. pic.twitter.com/PDjKyt52X8
— CM of Karnataka (@CMofKarnataka) June 15, 2019
Advertisement
ಬಳಿಕ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅನರನ್ನು ಭೇಟಿಯಾಗಿ ಮಹದಾಯಿ ಮತ್ತು ಮೇಕೆದಾಟು ಯೋಜನೆ ಸಂಬಂಧ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಮೇಕೆದಾಟು ಯೋಜನೆಗೆ ಸಹಕರಿಸುವಂತೆ ಹಾಗೂ ಮಹದಾಯಿ ನೀರು ಬಳಕೆಗಾಗಿ ಅಧಿಸೂಚನೆ ಹೊರಡಿಸುವಂತೆ ಮನವಿ ಸಲ್ಲಿಸಿದ್ದಾರೆ.
Advertisement
ಸಿಎಂ ಭೇಟಿಯ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಕೂಡ ಭೇಟಿಯಾಗಿದ್ದಾರೆ. ಈ ಮೂಲಕ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
Advertisement
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು.@gssjodhpur pic.twitter.com/Tg0B6LTsVC
— CM of Karnataka (@CMofKarnataka) June 15, 2019
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೂಡ ಸಿಎಂ ಭೇಟಿಯಾಗಿದ್ದು, ನರೇಗಾ ಯೋಜನೆ ಅಡಿ ಬಾಕಿ ಇರುವ 1,950 ಕೋಟಿ ರೂ. ಬಾಕಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ಕೇಳಿದ್ದಾರೆ. ಪಂಚಾಯತ್ ರಾಜ್ ಸಂಸ್ಥೆಗಳಿಗೆ ಬಾಕಿ ಇರುವ 233 ಕೋಟಿ ರೂ. ಪರ್ಫಾರ್ಮನ್ಸ್ ಗ್ರಾಂಟ್ಸ್ ಬಿಡುಗಡೆ ಮಾಡುವಂತೆ, ಕಾಫೀ ಮತ್ತು ರಬ್ಬರ್ ಬೋರ್ಡ್ ಗಳಿಗೆ ಆದಾಯ ತೆರಿಗೆ ವಿನಾಯಿತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ನೀತಿ ಆಯೋಗ ಸಭೆಗೆ ಆಗಮಿಸಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ ಅವರನ್ನು ಸಿಎಂ ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.https://t.co/Hl6TQsO8sX pic.twitter.com/SsSuOubpby
— CM of Karnataka (@CMofKarnataka) June 15, 2019
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನವದೆಹಲಿಯಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಅವರನ್ನು ಭೇಟಿಯಾಗಿ ಅಭಿನಂದಿಸಿದರು. pic.twitter.com/VGRhwtYHdm
— CM of Karnataka (@CMofKarnataka) June 15, 2019