ಬೆಂಗಳೂರು: ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಆನಂದ್ ಸಿಂಗ್ ಆರೋಗ್ಯ ವಿಚಾರಿಸಲು ಸಿಎಂ ಬರ್ತಿನಿ ಅಂತಾ ಹೇಳಿ 6 ಬಾರಿ ಭೇಟಿಯ ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗುತ್ತಿವೆ.
ಇತ್ತ ಸಿಎಂ ಬರುತ್ತಾರೆಂದು ಪೊಲೀಸರು ರಸ್ತೆಯನ್ನು ಖಾಲಿ ಮಾಡಿಸಿ ಕಾದು ಕಾದು ಸುಸ್ತಾಗುತ್ತಿದ್ದಾರೆ. ಸಿಎಂ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಪೊಲೀಸರು ಆಸ್ಪತ್ರೆ ಮುಂಭಾಗದ ರಸ್ತೆಯನ್ನ ಪದೇ ಪದೇ ಬಂದ್ ಮಾಡುವದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಸಿಎಂ ಆಗಮಿಸುವ ನಿರೀಕ್ಷೆಯಲ್ಲಿ ಪೊಲೀಸರು ಊಟಕ್ಕೂ ತೆರಳದೇ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇಂದು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಪರಮೇಶ್ವರ್ ನಾಯ್ಕ್ ಶಾಸಕರ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಆನಂದ್ ಸಿಂಗ್ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಕಣ್ಣು ಬಿಟ್ಟು ನನ್ನ ಜೊತೆ ಮಾತನಾಡಿದರು. ಅಚಾತುರ್ಯದಿಂದ ನಡೆದ ಘಟನೆ ಇದಾಗಿದ್ದು, ಅಂದು ನಾನು ದೆಹಲಿಯಲ್ಲಿದ್ದರಿಂದ ಹೆಚ್ಚಿನ ಮಾಹಿತಿ ಇಲ್ಲ. ಈ ಸಂಬಂಧ ಶಾಸಕ ಗಣೇಶ್ ಅವರ ಮೇಲೆ ಯಾವ ಕ್ರಮಕೈಗೊಳ್ಳಬೇಕೆಂಬುನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿ ಹೊರಟರು.
https://www.youtube.com/watch?v=G6pvtwbmf3g
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv