ಬೆಂಗಳೂರು: ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಸೇರಿದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿಯುವಂತವು. ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ ವೈಶಿಷ್ಟ್ಯವಾಗಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ.
Advertisement
Advertisement
ಅವರ ನಿಧನದಿಂದ ರಂಗಭೂಮಿ ಒಂದು ಅಪೂರ್ವ ರತ್ನವನ್ನು ಕಳೆದುಕೊಂಡಂತಾಗಿದೆ ಎಂದು ಬಣ್ಣಿಸಿದ್ದು, ಮೃತರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬ ಅಪಾರ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
Advertisement
ಸಿದ್ದರಾಮಯ್ಯ: ದಶಕಗಳ ಕಾಲ ವೃತ್ತಿ ರಂಗಭೂಮಿಯ ಕಾಯಕ ಮಾಡಿದ್ದ ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಹಾಸ್ಯ, ಅಭಿನಯ, ಹರಿತ ಸಂಭಾಷಣೆ ಅವರ ವೈಶಿಷ್ಟ್ಯ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
ಮಾಸ್ಟರ್ ಹಿರಣ್ಣಯ್ಯ ಅವರ ನಿಧನದಿಂದ ರಂಗಭೂಮಿ ಒಂದು ಅಪೂರ್ವ ರತ್ನವನ್ನು ಕಳೆದುಕೊಂಡಂತಾಗಿದೆ.
ನಾಟಕಗಳ ಮೂಲಕ ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ ವೈಶಿಷ್ಟ್ಯವಾಗಿತ್ತು.
ಮೃತರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ. pic.twitter.com/mBr3F0vMRg
— CM of Karnataka (@CMofKarnataka) May 2, 2019
ಎಚ್‍ಡಿಡಿ: ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯನವರು ವಿಧಿವಶರಾದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕಥಾವಸ್ತುವೇ ಪ್ರಮುಖವಾಗಿರುವ ಅವರ ನಾಟಕಗಳು ಜನಮಾನಸದಲ್ಲಿ ಸದಾ ಸ್ಮರಣೀಯವಾಗಿವೆ. ಹಿರಣ್ಣಯ್ಯ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಡಿಸಿಎಂ ಪರಮೇಶ್ವರ್: ರಂಗಕರ್ಮಿ ಹಿರಿಯ ರಂಗ ಕಲಾವಿದ, ಮಾಸ್ಟರ್ ಹಿರಣ್ಣಯ್ಯ ಅವರು ಇಂದು ನಿಧನರಾದ ಸುದ್ದಿ ತಿಳಿದು ಅತ್ಯಂತ ಬೇಸರವಾಗಿದೆ. ರಾಜ್ಯೋತ್ಸವ, ಗುಬ್ಬಿ ವೀರಣ್ಣಸೇರಿ ಅನೇಕ ಪ್ರಶಸ್ತಿ ಗರಿ ಅವರ ಮುಡಿಗೇರಿತ್ತು. ಲಂಚಾವತಾರದಂಥಹ ರಾಜಕೀಯ ವಿಡಂಬನಾತ್ಮಕ ನಾಟಕವು ಅವರಿಗೆ ಹೆಚ್ಚು ಹೆಸರು ತಂದುಕೊಟ್ಟಿದೆ. ಇವರ ನಿಧನದಿಂದ ರಂಗಭೂಮಿಯು ಓರ್ವ ಹಿರಿಯ ಕಲಾವಿದರನ್ನು ಕಳೆದುಕೊಂಡು ಅನಾಥ ಭಾವದಲ್ಲಿ ಮುಳುಗುವಂತಾಗಿದೆ. ಇವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುವೆ.
ದಶಕಗಳ ಕಾಲ ವೃತ್ತಿ ರಂಗಭೂಮಿಯ ಕಾಯಕ ಮಾಡಿದ್ದ ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಹಾಸ್ಯ, ಅಭಿನಯ, ಹರಿತ ಸಂಭಾಷಣೆ ಅವರ ವೈಶಿಷ್ಟ್ಯ.
ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/ga1ok0A7rR
— Siddaramaiah (@siddaramaiah) May 2, 2019
ಕಿಚ್ಚ ಸುದೀಪ್: ಮಾಸ್ಟರ್ ಹಿರಣಯ್ಯ ಅವರು ನನ್ನ ಹೃದಯಕ್ಕೆ ಹತ್ತಿರವಾದ ವ್ಯಕ್ತಿಯಾಗಿದ್ದವರು. 73 ಶಾಂತಿನಿವಾಸ ಸಿನಿಮಾದಲ್ಲಿ ಅವರೊಂದಿಗೆ ನಟಿಸುವ ಅವಕಾಶ ಸಿಕ್ಕಿದ್ದು ಸ್ಮರಣೀಯ. ಇವರ ಕಲೆಗೆ ಇವರು ನೀಡಿರುವ ಕೊಡುಗೆಯ ಬಗ್ಗೆ ಎಷ್ಟೇ ಹೇಳಿದರೂ ಕಡಿಮೆಯೇ ಆಗುತ್ತದೆ. ಅವರ ಪ್ರತಿಭೆಯ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ.
#SirMasterHiranaaiah Wil always be very close to my heart. Every frame I worked wth him during #73Shantinivasa is fresh n memorable. Anythn said Wil be very Lil about this bundle of talent who's contribution to field of art knew no boundaries. Rest in peace Sir.
— Kichcha Sudeepa (@KicchaSudeep) May 2, 2019