ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಂತ್ರಕ್ಕೆ ಪ್ರತಿಯಾಗಿ ಮಾಜಿ ಪ್ರಧಾನಿ ದೇವೇಗೌಡರ ಸಲಹೆಯಂತೆ ಹೊಸ ಬಾಣ ಬಿಡಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ.
ಸಿದ್ದರಾಮಯ್ಯಗೆ ಕ್ಯಾಬಿನೆಟ್ ಸ್ಥಾನಮಾನ ನೀಡುವ ಕುರಿತ ಆದೇಶ ಮುಂದೆ ಹೋಗಿದೆ. ಸೋಮವಾರವೇ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯಗೆ ಕ್ಯಾಬಿನೆಟ್ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಬೇಕಿತ್ತು. ಆದ್ರೆ ಇವತ್ತಿನ ತನಕ ಆ ಫೈಲ್ ಮೂವ್ ಆಗದೇ ಪೆಂಡಿಂಗ್ ಉಳಿದಿದೆ. ಹೀಗಾಗಿ ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಸಿಗುತ್ತಾ? ಇಲ್ವಾ? ಅನ್ನೋ ಚರ್ಚೆ ರಾಜ್ಯ ರಾಜಕಾರಣದಲ್ಲಿ ಜೋರಾಗಿದೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಮಾತಾಡಿರೋ ಸಿದ್ದರಾಮಯ್ಯರಿಗೆ ಎದುರಾಯ್ತು ಕಂಟಕ!
Advertisement
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರ ಶಾಂತಿವನದಲ್ಲಿದ್ದುಕೊಂಡು ದೋಸ್ತಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಬಾಂಬ್ ಸಿಡಿಸ್ತಿದ್ದು, ಇದರಿಂದ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ತತ್ತರಿಸಿದಂತೆ ಕಂಡು ಬಂದಿದೆ. ಹೀಗಾಗಿ ಈ ಇಬ್ಬರಿಗೂ ಟೆನ್ಶನ್ ಮೇಲೆ ಟೆನ್ಶನ್ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕಟ್ಟಿಹಾಕಲು ದೇವೇಗೌಡರು ಸಿಎಂ ಎಚ್ ಡಿಕೆಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ
Advertisement
Advertisement