ಬೆಂಗಳೂರು: ಬೆಳಗಾವಿಯ ರಾಜಕಾರಣಕ್ಕೆ ಬ್ರೇಕ್ ಹಾಕಲು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಹೊಸ ತಂತ್ರ ಹೂಡಿದ್ದಾರೆ ಎನ್ನಲಾಗಿದೆ.
ಜಿಲ್ಲೆಯನ್ನು ಮೂರು ಭಾಗವಾಗಿ ವಿಭಜನೆ ಮಾಡಲು ಗಂಭೀರ ಚಿಂತನೆ ನಡೆಸಲಾಗಿದೆ. ಹೀಗಾಗಿ ಹೊಸ ಜಿಲ್ಲೆಯಾಗಿ ಗೋಕಾಕ್, ಚಿಕ್ಕೋಡಿ ರಚನೆ ಮಾಡಲು ಮುಖ್ಯಮಂತ್ರಿಯವರು ಈಗಾಗಲೇ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದಾರೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.
Advertisement
ಜಿಲ್ಲೆ ವಿಭಜನೆ ಆದ್ರೆ ರಾಜಕೀಯ ಸಮಸ್ಯೆಗೆ ಕಡಿವಾಣ ಹಾಕಿದಂತಾಗುತ್ತದೆ. 3 ಲೋಕಸಭಾ ಕ್ಷೇತ್ರ ವ್ಯಾಪ್ತಿ ಹೊಂದಿರೋ ಬೆಳಗಾವಿ ಜಿಲ್ಲೆ ಸದ್ಯ 18 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಜಿಲ್ಲೆಯಲ್ಲಿ 10 ಜನ ಬಿಜೆಪಿ ಶಾಸಕರು, 8 ಜನ ಕಾಂಗ್ರೆಸ್ ಶಾಸಕರು ಇದ್ದಾರೆ.
Advertisement
ಬೆಳಗಾವಿ ಕೇಂದ್ರಿಕೃತ ರಾಜಕಾರಣಕ್ಕೆ ಕಡಿವಾಣ ಸಾಧ್ಯತೆಗಳಿವೆ. ಗಡಿ ವಿವಾದ ಹಿನ್ನೆಲೆಯಲ್ಲಿ ಜಿಲ್ಲಾ ವಿಭಜನೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv