ಬೆಂಗಳೂರು: ಹೇಗಾದ್ರೂ ಮಾಡಿ ಸರ್ಕಾರವನ್ನು ಉಳಿಸಿಕೊಳ್ಳಬೇಕು ಎಂದು ಪಣ ತೊಟ್ಟಿರುವ ಸಿಎಂ ಕುಮಾರಸ್ವಾಮಿ ಅತೃಪ್ತ ಶಾಸಕ ಡಾ.ಉಮೇಶ್ ಜಾಧವ್‍ಗೆ ಬಿಸಿ ಮುಟ್ಟಿಸಿದ್ದಾರೆ.
ರಾಜ್ಯ ಉಗ್ರಾಣ ನಿಗಮಕ್ಕೆ ಉಮೇಶ್ ಜಾಧವ್ ನೇಮಕಾತಿಯನ್ನ ರದ್ದು ಮಾಡಿದ್ದಾರೆ. ಉಮೇಶ್ ಜಾಧವ್ ಬದಲಾಗಿ ಉಗ್ರಾಣ ನಿಗಮಕ್ಕೆ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್‍ರನ್ನ ಅಧ್ಯಕ್ಷರನ್ನಾಗಿ ನೇಮಿಸಿ ಸಿಎಂ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಅತೃಪ್ತರ ಓಲೈಕೆಗೂ ಸಿಎಂ ಮುಂದಾಗಿದ್ದಾರೆ.
ರಾಯಚೂರು ಗ್ರಾಮಾಂತರ ಶಾಸಕ ಬಸವನಗೌಡ ದದ್ದಲ್‍ಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮ ನೀಡಿ ಆದೇಶ ಹೊರಡಿಸಿದ್ದಾರೆ. ಪ್ರತಾಪ್‍ಗೌಡ ಹಾಗೂ ಬಸವನಗೌಡ ಈ ಇಬ್ಬರೂ ಶಾಸಕರು ಬಿಜೆಪಿ ಕಡೆಗೆ ವಾಲುವ ಅನುಮಾನ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದಾರೆ.
ಆದರೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ.ಸುಧಾಕರ್‍ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಇನ್ನೂ ಮರೀಚಿಕೆಯಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದ ಬಗ್ಗೆ ಇನ್ನೂ ಸಸ್ಪೆನ್ಸ್ ಇರಿಸಿದ್ದು, ಸುಧಾಕರ್ ನಡೆ ಕುತೂಹಲ ಮೂಡಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv