ಮಂಡ್ಯ: ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಬಿಜೆಪಿ ವಿರೋಧಿ ಅಲೆ ಕಂಡು ಬಂದಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಯಲ್ಲಿ ನೈಜ ವಸ್ತು ಸ್ಥಿತಿ ಇದ್ದು, ಕರ್ನಾಟಕದಿಂದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಲು ತೆರಳಿದ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಬಿಜೆಪಿ ಅಧಿಕಾರದಲ್ಲಿದ್ದ ರಾಜ್ಯಗಳಲ್ಲೇ ವಿರೋಧಿ ಅಲೆ ಇದೆ ತಿಳಿಸಿದ್ದಾರೆ. ಅಲ್ಲದೇ ಮುಂದಿನ ಲೋಕಸಭೆ ಚುನಾವಣೆ ಮೇಲೆ ಈ ಪಂಚ ರಾಜ್ಯ ಚುನಾವಣೆ ಫಲಿತಾಂಶ ಪ್ರಭಾವ ಬೀರುತ್ತೆ ಎಂದರು. ಇದನ್ನು ಓದಿ: ರಾಜಸ್ಥಾನದಲ್ಲಿ ಕಾಂಗ್ರೆಸ್, ತೆಲಂಗಾಣದಲ್ಲಿ ಟಿಆರ್‌ಎಸ್ – ಮಧ್ಯಪ್ರದೇಶ, ಛತ್ತೀಸ್‍ಗಢ ಕೈ, ಕಮಲ ಮಧ್ಯೆ ಭಾರೀ ಫೈಟ್
Advertisement
Advertisement
ಬಿಜೆಪಿಗೆ ರಾಷ್ಟ್ರ ಮಟ್ಟದಲ್ಲಿ ಹಿನ್ನಡೆ ಆರಂಭವಾಗಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಲಿದ್ದು ಈ ಬಗ್ಗೆ ಅನುಮಾನವೇ ಇಲ್ಲ. ರಾಜ್ಯದಲ್ಲಿ ಬಿಜೆಪಿ ಹಗಲು ಕನಸು ಕಾಣುತ್ತಲೇ ಇರುತ್ತದೆ. ಅವರ ಕನಸು ಕಾಣುವುದನ್ನು ಮುಂದುವರಿಸಲಿ. ರಾಜ್ಯದಲ್ಲಿ ಸರ್ಕಾರ ಅಭಿವೃದ್ಧಿ ಕಾರ್ಯಗಳತ್ತ ಗಮನ ನೀಡುತ್ತದೆ ಎಂದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv