ಬೆಂಗಳೂರು: ರಾಜಕೀಯ ಜಂಜಾಟದಿಂದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೊಂಚ ಬಿಡುವು ಪಡೆದುಕೊಂಡಿದ್ದು, ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.
ಅರಣ್ಯ ಪ್ರದೇಶಕ್ಕೆ ತೆರಳಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿಎಂ ಅವರು 3 ದಿನ ವಿಶ್ರಾಂತಿಗೆ ತೆರಳಿದ್ದಾರೆ. ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ ವಿಶ್ರಾಂತಿ ಗೃಹವೊಂದರಲ್ಲಿ 3 ದಿನ ವಾಸ್ತವ್ಯ ಹೂಡಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯವರು ತಮ್ಮ ಪತ್ನಿ ಹಾಗೂ ಪುತ್ರ ನಿಖಿಲ್ ಜೊತೆ ಅಲ್ಲಿಗೆ ತೆರಳಿದ್ದಾರೆ. ವಿಶ್ರಾಂತಿ ಪಡೆದ ಬಳಿಕ ಅಂದರೆ ನವೆಂಬರ್ 11 ರ ಸಂಜೆ ರಾಜಧಾನಿಗೆ ವಾಪಸ್ಸಾಗಲಿದ್ದಾರೆ.
Advertisement
Advertisement
ಅಕ್ಟೋಬರ್ ತಿಂಗಳಲ್ಲಿ ಎರೋಟಿಕ್ ವಾಲ್ವ್ ಅಳವಡಿಕೆ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಗೆ ದಾಖಲಾಗಿ, ಡಿಸ್ಚಾರ್ಜ್ ಆಗಿದ್ದರು. ಎಚ್‍ಡಿ ಕುಮಾರಸ್ವಾಮಿ ಹೃದಯ ಶಸ್ತ್ರ ಚಿಕಿತ್ಸೆ ಸಂಬಂಧ ಸೆಪ್ಟೆಂಬರ್ 23 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಡಾ. ಸತ್ಯಕೀ ಹಾಗೂ ಡಾ.ಮಂಜುನಾಥ್ ಅವರ ನೇತೃತ್ವದಲ್ಲಿ ಆಪರೇಷನ್ ನಡೆದಿತ್ತು ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಎಚ್‍ಡಿಕೆ ಗುಣಮುಖರಾಗಲೆಂದು ದೇವರ ಮೊರೆ ಹೋಗಿದ್ದ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ದೇವಾಲಯ, ಚರ್ಚ್ ಹಾಗೂ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews