– ಮಂಜುನಾಥನ ಸನ್ನಿಧಿಯಲ್ಲಿ ಸಿಎಂ ಮತ್ತೊಂದು ಶಪಥ
ಬೆಂಗಳೂರು: ಅಪಚಾರ ಎಸಗಿದ್ರೆ ಧರ್ಮಸ್ಥಳ ಮಂಜುನಾಥಸ್ವಾಮಿ ಬಿಡಲ್ಲ. ಮಂಜುನಾಥಸ್ವಾಮಿ ಜೊತೆ ಚೆಲ್ಲಾಟವಾಡಬಾರದು. 12 ವರ್ಷಗಳ ಹಿಂದೆ ಅಪಚಾರವೆಸಗಿದ್ದೆ ಎಂದು ಹೇಳಿದ ಬೆನ್ನಲ್ಲೇ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಮತ್ತೆ ಪ್ರಮಾಣ ಮಾಡಿದ್ದಾರೆ.
ಇಂದು ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಜೆಟ್ ಗೂ ಮುನ್ನ ಬಿಡುಗಡೆ ಮಾಡಿದ್ದ ಆಡಿಯೋದಲ್ಲಿರೋದು ಬಿಎಸ್ ಯಡಿಯೂರಪ್ಪ ಅವರ ಧ್ವನಿಯೇ ಆಗಿದೆ. ಒಂದು ವೇಳೆ ಈ ವಿಚಾರ ಸಾಬೀತಾಗದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಶಪಥ ಮಾಡಿದ್ದಾರೆ. ಇದನ್ನೂ ಓದಿ: ನನ್ನಿಂದ ಅಪಚಾರವಾಗಿದೆ – ಧರ್ಮಸ್ಥಳದಲ್ಲಿ ಸಿಎಂ ಎಚ್‍ಡಿಕೆ
ನಾನು ಆಡಿಯೋ ಮಾಡಿಸಿಲ್ಲ. ಕಾರ್ಯಕರ್ತರು ಆಡಿಯೋ ಮಾಡಿದ್ದಾರೆ. ಬಿಎಸ್‍ವೈ ಪುತ್ರ, ಯೋಗೇಶ್ವರ್ ಹಾಗೂ ಅಶ್ವಥ್ ನಾರಾಯಣ ಈ ಆಪರೇಷನ್ ಸೂತ್ರಧಾರರಾಗಿದ್ದಾರೆ. ಆ ಆಡಿಯೋದಲ್ಲಿ ಇರೋದು ಯಡಿಯೂರಪ್ಪ ವಾಯ್ಸೇ ಆಗಿದೆ ಎಂದು ಮತ್ತೊಮ್ಮೆ ಎಚ್‍ಡಿಕೆ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅದು ನಕಲಿ ಆಡಿಯೋ, ಸಾಬೀತಾದರೆ ರಾಜಕೀಯ ನಿವೃತ್ತಿ – ಬಿಎಸ್‍ವೈ ಸವಾಲು
ಒಟ್ಟಿನಲ್ಲಿ ರಾಜ್ಯ ರಾಜಕೀಯದಲ್ಲಿ ಆಡಿಯೋ-ವಿಡಿಯೋ ಬಗ್ಗೆ ಭಾರೀ ಚರ್ಚೆಗಳಾಗುತ್ತಿದೆ. ಎಚ್‍ಡಿಕೆ ಬಿಡುಗಡೆಗೊಳಿಸಿದ್ದ ಆಡಿಯೋ ಸಾಬೀತಾದ್ರೆ ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಶುಕ್ರವಾರ ಬಿಎಸ್‍ವೈ ಹೇಳಿದ್ದರು. ಈ ಬೆನ್ನಲ್ಲೆ ಇದೀಗ ಆಡಿಯೋ ಸಾಬೀತಾಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಆಡಿಯೋದಲ್ಲಿರೋದು ಬಿಎಸ್‍ವೈ ಧ್ವನಿಯೆಂದು ನಾನು ಹೇಳಿಲ್ಲ- ಎಚ್‍ಡಿಕೆ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv