ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಯುವಕನ ಆರೋಗ್ಯ ವಿಚಾರಣೆಗೆ ಸಿಎಂ ಕುಮಾರಸ್ವಾಮಿ ಆಗಮಿಸಿದ್ದರಿಂದ ತುರ್ತು ಚಿಕಿತ್ಸೆಗೆ ಆಗಮಿಸಿದ್ದ ರೋಗಿಯೊಬ್ಬರು ಸ್ಟ್ರೆಚ್ಚರ್‍ನಲ್ಲಿಯೇ ಕಾದು ಚಿಕಿತ್ಸೆಗಾಗಿ ಪರದಾಟ ನಡೆಸಿದ್ದಾರೆ.
ಶುಕ್ರವಾರ ಬೆಳಗ್ಗೆ ಜಯನಗರದ ನ್ಯಾಷನಲ್ ಕಾಲೇಜ್ ಮೆಟ್ರೋ ನಿಲ್ದಾಣದಲ್ಲಿ ವೇಣುಗೋಪಾಲ್ ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ ಘಟನೆಯಲ್ಲಿ ಗಾಯಗೊಂಡಿದ್ದ ಆತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯುವಕನ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಆತನ ತಾಯಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ಕರೆಸಿಕೊಂಡಿದ್ದರು.
Advertisement
Advertisement
ಮೆಟ್ರೋ ನಿಲ್ದಾಣದಲ್ಲಿ ಯುವಕ ರೈಲಿಗೆ ಸಿಲುಕಿದ ಘಟನೆ ಬಗ್ಗೆ ಮಾಹಿತಿ ಪಡೆದ ಸಿಎಂ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಆಗಮಿಸಿದ್ದರು. ಸಿಎಂ ಆಸ್ಪತ್ರೆಗೆ ಬಂದ ಕಾರಣ ಪೊಲೀಸರು ಬೀಗಿ ಭದ್ರತೆಯನ್ನು ಏರ್ಪಡಿಸಿದ್ದರು. ಸಿಎಂ ಭೇಟಿಯಿಂದ ತುರ್ತು ಚಿಕಿತ್ಸೆಗೆ ಆಗಮಿಸಿದ ಕೆಲ ರೋಗಿಗಳು ಪರದಾಟ ನಡೆಸಿದರು.
Advertisement
ಆಸ್ಪತ್ರೆಯ ಭೇಟಿ ಬಳಿಕ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಮೆಟ್ರೋ ನಿಲ್ದಾಣದಲ್ಲಿ ಮತ್ತಷ್ಟು ಭದ್ರತೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೆ ಇಂದಿನ ಘಟನೆ ಘಟನೆ ಮೆಟ್ರೋ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿಯಿಂದ ಆಗಿಲ್ಲ. ಕುಟುಂಬದ ಗಲಾಟೆಯಿಂದಾಗಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನ ಜೀವ ರಕ್ಷಣೆ ಮಾಡಿದ ಮೆಟ್ರೋ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುತ್ತೆನೆ ಎಂದರು. ಇದನ್ನು ಓದಿ: ಫೋನ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮೆಟ್ರೋ ಹಳಿಗೆ ಹಾರಿದ ಯುವಕ!
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv