ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಭತ್ತದ ನಾಟಿ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದೀಗ ಅದನ್ನು ಕಟಾವು ಮಾಡಲು ತೆರಳಲಿದ್ದಾರೆ.
ಶುಕ್ರವಾರ ಸಂಜೆ 4ಗಂಟೆ ಸುಮಾರಿಗೆ ಭೇಟಿ ನೀಡಿ ಭತ್ತ ಕಟಾವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಭತ್ತದ ಕಟಾವು ಬಳಿಕ ಸಂಜೆ 5:30ರ ವೇಳೆಗೆ ಇತ್ತೀಚೆಗೆ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಪಾಂಡವಪುರ ತಾಲೂಕಿನ ವದೆಸಮುದ್ರ ಗ್ರಾಮದಲ್ಲಿ ಪರಿಹಾರದ ಚೆಕ್ ವಿತರಣೆ ಮಾಡಲಿದ್ದಾರೆ.
Advertisement
Advertisement
ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಮತ್ತು ಅರಳಕುಪ್ಪೆ ಗ್ರಾಮದ ವ್ಯಾಪ್ತಿಗೆ ಸೇರಿದ ಗದ್ದೆಯಲ್ಲಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಆಗಸ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ತಾವೇ ಸ್ವತಃ ರೈತರಾಗಿ ಗದ್ದೆಗಿಳಿದು ನಾಟಿ ಮಾಡಿದ್ದರು.
Advertisement
ರೈತನಾಗಿದ್ದ ಸಿಎಂ
1980ರ ದಶಕದಲ್ಲಿ ಕುಮಾರಸ್ವಾಮಿ ಜಮೀನಿನ ಹುಡುಕಾಟದಲ್ಲಿದ್ದರು. ಕೊನೆಗೆ ರಾಮನಗರ ಜಿಲ್ಲೆಯ ಕೇತಿಗಾನಹಳ್ಳಿಯಲ್ಲಿ ಜಮೀನು ಪಡೆದಿದ್ದರು. ಆರಂಭದಲ್ಲಿ ಈ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಪ್ರತಿ ದಿನ ಸುಮಾರು 8, 9 ಗಂಟೆ ಜಮೀನಿನಲ್ಲಿ ಎಚ್‍ಡಿಕೆ ಕೆಲಸ ಮಾಡುತ್ತಿದ್ದರು. 48 ಎಕರೆ ವಿಸ್ತೀರ್ಣದ ತೋಟದ ಈ ಜಾಗದಲ್ಲಿ 1992-93 ರಲ್ಲಿ ಮನೆ ಕಟ್ಟಿದ್ದರು.
Advertisement
ನಾಟಿ ಮಾಡಿ ಗಿಮಿಕ್
ರೈತರ ಗದ್ದೆಯಲ್ಲಿ ಕುಮಾರಸ್ವಾಮಿ ಭತ್ತ ನಾಟಿ ಮಾಡೋದು ಒಂದು ಗಿಮಿಕ್ ಆಗಿದ್ದು, ನಾಟಿ ಮಾಡುತ್ತಿರುವುದು ಒಂದು ಮಾಡೆಲ್ ನಾಟಕ ಎಂದು ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದರು. ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಂದರ್ಭದಲ್ಲಿ ಗಣ್ಯರ ಸತ್ಕಾರದ ಹೆಸರಿನಲ್ಲಿ ತೆರಿಗೆ ಹಣ ಲೂಟಿಯಾಗಿದೆ. ಸಿಎಂ ಪ್ರಕರಣವನ್ನು ತನಿಖೆ ನಡೆಸಬೇಕು. ಈ ಸರ್ಕಾರದಲ್ಲಿ ಎಲ್ಲಾ ರೀತಿಯಲ್ಲೂ ಲೂಟಿ ನಡೆಯುತ್ತಿದೆ. ಮೊದಲು ಬಗರ್ ಹುಕುಂ ರೈತರಿಗೆ ಭೂಮಿ ಕೊಡಿ ಎಂದು ಆಗ್ರಹಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv