ಚಾಮರಾಜನಗರ: ಸುಳ್ವಾಡಿ ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ಸೇವನೆಯಿಂದ ದುರಂತ ತಾಣವಾಗಿರುವ ಹನೂರಿನ ಸುಳ್ವಾಡಿಗೆ ನಾಳೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ.
ಇಂದು ಸಚಿವ ಸಾರಾ ಮಹೇಶ್ ಅವರು ಸುಳ್ವಾಡಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಇತ್ತ ಮಲೆಮಹದೇಶ್ವರ ಬೆಟ್ಟದ ಸಾಲೂರು ಮಠ ಇದೀಗ ಬಿಕೋ ಎನ್ನುತ್ತಿದ್ದು, ಸಾಲೂರು ಮಠದ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ 1ನೇ ಆರೋಪಿ ಇಮ್ಮಡಿ ಮಹದೇವಸ್ವಾಮಿ ವಿರುದ್ಧ ಸಿಡಿದೆದ್ದಿರುವ ಭಕ್ತರು, ಸಾಲೂರು ಮಠದಲ್ಲಿದ್ದ ಕಿರಿಯ ಸ್ವಾಮೀಜಿ ಫೋಟೋ ಹರಿದು ಆಕ್ರೋಶ ಹೊರಹಾಕಿದ್ದಾರೆ.
Advertisement
Advertisement
ಇತ್ತ ಕೀಟನಾಶಕ ಸೇವಿಸಿ ಅಸ್ವಸ್ಥರಾದವರಿಗೆ 11ನೇ ದಿನವೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 33 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 8 ಮಂದಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡುತ್ತಿದ್ದರೆ, 12 ಮಂದಿಗೆ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 13 ಮಂದಿಗೆ ಸಾಮಾನ್ಯ ವಾರ್ಡ್ ನಲ್ಲಿ ನೀಡಲಾಗುತ್ತಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv