ಬೆಂಗಳೂರು: ಆಪರೇಷನ್ ಕಲಮದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್‍ಐಟಿ) ರಚನೆಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಿದ್ದಾರೆ.
ಇಂದಿನ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿಯವರು ಆಪರೇಷನ್ ಕಮಲ ಮಾಡಿರುವ ಆಡಿಯೋದಲ್ಲಿ 50 ಕೋಟಿ ಕೊಟ್ಟು ಸ್ಪೀಕರ್ ಅವರನ್ನು ಖರೀದಿಸಿರುವ ವಿಚಾರ ಭಾರೀ ಸದ್ದು ಮಾಡಿತ್ತು. ಕಲಾಪದ ಆರಂಭದಲ್ಲೇ ಸ್ಪೀಕರ್ ಈ ವಿಚಾರ ಪ್ರಸ್ತಾಪಿಸಿ ಕಣ್ಣೀರು ಹಾಕಿದ್ದರು. ಬಳಿಕ ಆಡಿಯೋ ಕುರಿತು ತನಿಖೆಗಾಗಿ ಎಸ್‍ಐಟಿ ರಚನೆಗೆ ಸಿಎಂ ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದ್ದು, 15 ದಿನಗಳಲ್ಲಿ ಸಮಗ್ರ ತನಿಖೆ ಮಾಡಿ ವರದಿ ಸಲ್ಲಿಸಬೇಕೆಂದು ಖಡಕ್ ಆಗಿ ಹೇಳಿದ್ದಾರೆ.
ಸದನದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ರಾಜ್ಯದ ಗೌರವಾನ್ವಿತ ಸ್ಥಾನದಲ್ಲಿದ್ದೀರಿ, ಸರ್ಕಾರ ರಚನೆಯಾದಾಗಿನಿಂದ ನೀವು ನಿಷ್ಪಕ್ಷವಾಗಿ ಕೆಲಸ ಮಾಡುತ್ತಿದ್ದೀರಿ. ಆದರೆ ಈ ರೀತಿಯ ಘಟನೆಯಿಂದ ಇಂದು ತಮ್ಮ ಮನಸ್ಸಿಗೆ ಘಾಸಿಯಾಗಿದೆ. ಮೊದಲೆಯದಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಭಾಗಿಯಾಗಿರುವ ಗಣ್ಯರು ಅವರವರ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಈ ವಿಚಾರದ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ದಯವಿಟ್ಟು ಇದನ್ನು ತುಂಬಾ ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ. ನಿಮ್ಮ ಬಗ್ಗೆ ಕೇವಲವಾಗಿ ಮಾತನಾಡಿದವರು, ಖರೀದಿ ಮಾಡಿದ್ದೀವಿ ಎಂದವರು ತಕ್ಕ ಶಿಕ್ಷೆ ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv