ಬೆಂಗಳೂರು: ಅಪರಾಧ ಕೃತ್ಯಗಳನ್ನು ನಿಯಂತ್ರಿಸುವುದು ಪೊಲೀಸ್ ಅಧಿಕಾರಿಗಳ ಕರ್ತವ್ಯ. ಆದರೆ ಎಷ್ಟೋ ಪ್ರಕರಣಗಳಲ್ಲಿ ಆರಕ್ಷರೇ ಅಪರಾಧ ಕೃತ್ಯಗಳನ್ನು ಮಾಡಿ ತಪ್ಪಿತಸ್ಥರ ಸ್ಥಾನದಲ್ಲಿ ನಿಂತಿದ್ದಾರೆ. ಅಂತಹದ್ದೊಂದು ಪ್ರಕರಣ ನಗರದಲ್ಲಿ ನಡೆದಿದೆ.
ಹೌದು, ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸರು ಬಂಧನಕ್ಕೊಳಗಾಗಿದ್ದಾರೆ. ಶಿವಕುಮಾರ್ ಹಾಗೂ ಸಂತೋಷ್ ಎಂಬ ಪೇದೆಗಳು ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದಿದ್ದಾರೆ. ಇವರು, ಗಾಂಜಾ ಪೆಡ್ಲರ್‌ಗಳ ಮೂಲಕ ಗಾಂಜಾ ತರಿಸಿಕೊಂಡು ಮಾರಾಟಕ್ಕೆ ಮಾಡುತ್ತಿದ್ದರು. ಇದನ್ನೂ ಓದಿ: ‘ಆಕ್ಟ್ -1978’ ಸಿನಿಮಾ ಪ್ರೇರಣೆ – ಬ್ಯಾಂಕ್ ಮುಂದೆ ಪ್ರತಿಭಟಿಸಿ ನ್ಯಾಯ ಪಡೆದ ಮಹಿಳೆ
Advertisement
Advertisement
ಅಚ್ಚರಿದಾಯಕ ವಿಷಯವೆಂದರೆ, ಇವರು ಸಿಎಂ ಬೊಮ್ಮಾಯಿ ಮನೆಯ ಭದ್ರತೆಗೆ ನಿಯೋಜನೆಗೊಂಡಿದ್ದರು. ಇವರಿಬ್ಬರೂ ಕೊರಮಂಗಲ ಪೊಲೀಸ್ ಠಾಣಾ ಸಿಬ್ಬಂದಿಯಾಗಿದ್ದಾರೆ. ಮೋಸ್ಟ್ ವಾಂಟೆಡ್ ಪೆಡ್ಲರ್‌ಗಳಾದ ಅಖಿಲ್ ರಾಜ್ ಹಾಗೂ ಅಮ್ಜದ್ ಖಾನ್ ಬಳಿ ಗಾಂಜಾ ಖರೀದಿಸಿ ಮಾರಾಟ ಮಾಡುತ್ತಿದ್ದರು.
Advertisement
ಪೆಡ್ಲರ್‌ಗಳಿಂದ ಗಾಂಜಾ ಪಡೆದು ಹಣ ಕೊಡದೇ ಹಲ್ಲೆಗೆ ಮುಂದಾಗಿದ್ದರು. ಮುಖ್ಯಮಂತ್ರಿಗಳ ಮನೆ ಇರುವ ಆರ್.ಟಿ. ನಗರದ 80 ಅಡಿ ರಸ್ತೆ ಬಳಿ ಡೀಲ್ ಮಾಡುತ್ತಿದ್ದರು. ಸಿಎಂ ಮನೆ ಬಳಿ ಗಸ್ತಿನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದ್ದಾರೆ. ಖಾಕಿ ತೊಟ್ಟವರೇ ಗಾಂಜಾ ಮಾರಾಟಕ್ಕಿಳಿದಿರುವುದನ್ನು ತಿಳಿದು ಪೊಲೀಸರು ಅಚ್ಚರಿಗೊಂಡಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್- ಇಬ್ಬರು ಸಾವು, ಮತ್ತಿಬ್ಬರು ಗಂಭೀರ
Advertisement
ಪೊಲೀಸರು ಹಾಗೂ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿರುವ ಆರ್.ಟಿ.ನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.