ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸಿಎಂ ಇಬ್ರಾಹಿಂ ಅಧಿಕೃತವಾಗಿ ಘೋಷಿಸಿದರು.
ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸ್ಥಾನಕ್ಕೆ ಸಹ ಇಂದೇ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕಳುಹಿಸುತ್ತೇನೆ ಎಂದು ತಿಳಿಸಿದರು.
Advertisement
Advertisement
ಸ್ವಾಭಿಮಾನ ಹಾಗೂ ರಾಜ್ಯದ ಹಿತ ದೃಷ್ಡಿಯಿಂದ ಈ ರಾಜೀನಾಮೆ ಅನಿವಾರ್ಯವಾಗಿದೆ. ಕಾಂಗ್ರೆಸ್‌ನಲ್ಲಿ ಸ್ವಾಭಿಮಾನ ಉಳಿಸಿಕೊಂಡು ಇರಲು ಸಾಧ್ಯವಿಲ್ಲ. 1994ರಲ್ಲಿ ಆದ ರಾಜಕೀಯ ಸ್ಥಿತಿ 2022ರಲ್ಲೂ ಆಗಲಿದೆ. ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ. ಪಂಚರಾಜ್ಯ ಚುನಾವಣೆಯಲ್ಲೂ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಭಾರತದ ರಫೇಲ್ ಯುದ್ಧ ವಿಮಾನ ಎದುರಿಸಲು ಚೀನಾದ ಜೆ-10ಸಿ ಫೈಟರ್ ಜೆಟ್ ಖರೀದಿಸಿದ ಪಾಕಿಸ್ತಾನ
Advertisement
Advertisement
ಇವತ್ತು ಅಥವಾ ನಾಳೆ ದೇವೇಗೌಡರು ಕುಮಾರಸ್ವಾಮಿ ಜೊತೆ ಕುಳಿತು ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇವೆ. ಗೊತ್ತಿಲ್ಲದ ದಾರಿಯಲ್ಲಿ ಹೋಗುವುದಕ್ಕಿಂತ ಗೊತ್ತಿರುವ ದಾರಿಯಲ್ಲಿ ಹೋಗುವುದು ಒಳಿತು ಎಂದು ತಿಳಿಸಿದರು.
ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ನಡೆಸಿದ ಸಂಧಾನ ವಿಫಲವಾಗಿದ್ದು, ಕಾಂಗ್ರೆಸ್ ತೊರೆಯುವುದು ಅಧಿಕೃತವಾಗಿದೆ. ಈ ಹಿನ್ನೆಲೆಯಲ್ಲಿ ತವರು ಪಕ್ಷವಾದ ಜೆಡಿಎಸ್ ವಾಪಸಾಗುವುದು ಬಹುತೇಕ ಖಚಿತವಾಗಿದೆ. ಇದನ್ನೂ ಓದಿ: ಹೆಚ್‍ಡಿಕೆ ಸದನದಲ್ಲಿ ಸದ್ದು ಮಾಡಿದ್ರೂ ನಿಂತಿಲ್ಲ ಜೂಜಾಟ- ಪೊಲೀಸ್ ಅಧಿಕಾರಿಯೇ ಕಿಂಗ್‍ಪಿನ್