ಕಲಬುರಗಿ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ (Gujarat Election) ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ (Congress) ಪಕ್ಷ, ಡ್ರೈವರ್ ಇಲ್ಲದ ಬಸ್ ತರಹ ಆಗಿದೆ ಎಂದು ಜೆಡಿಎಸ್ (JDS) ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಲೇವಡಿ ಮಾಡಿದರು.
ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಗುರುನೂ ಇಲ್ಲ, ಗುರಿಯೂ ಇಲ್ಲ. ಪ್ರಾದೇಶಿಕ ಪಕ್ಷಗಳನ್ನು ಕೊಲ್ಲಲು ಸಾಕಷ್ಟು ಪ್ರಯತ್ನ ಮಾಡಿದ ಕಾಂಗ್ರೆಸ್ ಇಂದು ಹೀನಾಯ ಸೋಲು ಅನುಭವಿಸಿದೆ ಎಂದು ಟೀಕಿಸಿದರು.
Advertisement
Advertisement
ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಇಡೀ ರಾಜ್ಯಾದ್ಯಂತ ನಡುರಾತ್ರಿ 3 ಗಂಟೆಯಾದರೂ ಹಳ್ಳಿಗಳಲ್ಲಿ ಸ್ವಾಗತ ಕೋರುತ್ತಿದ್ದಾರೆ. ಮೊನ್ನೆ ಶಿರಾದಲ್ಲಿ ಮುಸ್ಲಿಂ ಮಹಿಳೆಯರು ಅದ್ಧೂರಿಯಾಗಿ ಪಂಚರತ್ನ ರಥಯಾತ್ರೆಯನ್ನು ಮಧ್ಯರಾತ್ರಿ 2 ಗಂಟೆಗೆ ಸ್ವಾಗತ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಗುಜರಾತ್‍ನಲ್ಲಿ 7ನೇ ಬಾರಿಗೆ ಬಿಜೆಪಿಗೆ ಅಧಿಕಾರ – ಅಧಿಕೃತ ವಿಪಕ್ಷ ಸ್ಥಾನವನ್ನೂ ಕಳೆದುಕೊಂಡ ಕಾಂಗ್ರೆಸ್
Advertisement
Advertisement
2024ರ ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನೆಲಕಚ್ಚಿಕೊಳ್ಳಲಿವೆ. ಅದೇ ರೀತಿ ಮುಂಬರುವ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸಹ ಸ್ವಂತ ಬಲದ ಮೇಲೆ 100 ಸ್ಥಾನಗಳನ್ನು ದಾಟಿ ಜೆಡಿಎಸ್ ಅಧಿಕಾರ ಪಡೆದು, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ದೇಶದ ಹಿತಕ್ಕಾಗಿ ಇನ್ನಷ್ಟು ಕಠಿಣ ನಿರ್ಣಯ : ಮೋದಿ
ಬಿಜೆಪಿ ಅಂಗಾಂಗಗಳು ಕುಸಿದು ಬಿದ್ದಿದ್ದು, ಈ ಚುನಾವಣೆಯ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಲೆಗೆ ಹೋಗುತ್ತಾರೆ. ಆರ್‌ಎಸ್‌ಎಸ್ ಆಂತರಿಕ ಸರ್ವೇಯ ಪ್ರಕಾರ ಬಿಜೆಪಿ ಪಕ್ಷ 50 ಸ್ಥಾನ ದಾಟುವುದಿಲ್ಲ ಎಂದಿದೆ ಎಂದು ಟೀಕಿಸಿದರು.