ಬಾಗಲಕೋಟೆ: ಪ್ರಧಾನಿ ಮೋದಿ ಈ ಹಿಂದೆ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ನವಾಜ್ ಷರೀಫ್ ಕರೆಯದೇ ಏಕೆ ಮೋದಿ ಹೋಗಿದ್ದರು ಎಂದು ಪ್ರಶ್ನಿಸಿರುವ ಮಾಜಿ ಸಚಿವ ಸಿಎಂ ಇಬ್ರಾಹಿಂ, ಬಸವಣ್ಣನವರ ವಚನವನ್ನು ಪ್ರಸ್ತಾಪಿಸಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜಮಖಂಡಿ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ ವೇಳೆ ಸಿಎಂ ಇಬ್ರಾಹಿಂ ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಮಾಜಿ ಸಿದ್ದರಾಮಯ್ಯ ಅವರನ್ನು ದಲಿತ, ಲಿಂಗಾಯತ, ಬ್ರಾಹ್ಮಣ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಆದರೆ ಈ ಹಿಂದೆ ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಏಕೆ ಹೋಗಿದ್ದರು. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಇವರನ್ನ ಕರೆದಿದ್ದರಾ ಎಂದು ಪ್ರಶ್ನೆ ಮಾಡಿದರು. ಅಲ್ಲದೇ ಬಸವಣ್ಣನವರು ತಮ್ಮ ವಚನದಲ್ಲಿ ಹೇಳಿದ್ದಾರೆ, ಕರೆಯದೆ ಬರುವವನ, ಬರಿಗಾಲಲ್ಲಿ ನಡೆಯುವವನ ಕರೆದು ಕೆರದಲ್ಲಿ ಹೊಡೆಯೆಂದ ಸರ್ವಜ್ಞ ಎಂದು ಹೇಳಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದರು.
Advertisement
Advertisement
ಪ್ರಧಾನಿಗಳು ಚುನಾವಣೆ ಮುನ್ನ ಅಚ್ಛೇ ದಿನ್ ಬರುತ್ತದೆ ಎಂದು ಹೇಳಿದ್ದರು, ಆದರೆ ಇಂದು ನಮಗೆ ಹಳೆ ದಿನಗಳು ನೀಡಿದರೆ ಸಾಕು. ಪ್ರತಿ ತಿಂಗಳು ಮನ್ ಕೀ ಬಾತ್ ಎಂದು ಬರುತ್ತಾರೆ. ಕಾಲೇಜು ಹುಡುಗ, ಹುಡುಗಿ ಮನ್ ಕೀ ಬಾತ್ ಹೇಳಬೇಕು. ಆದರೆ ನಮಗೇ ಬೇಕಿರುವುದು ಕಾಮ್ ಕೀ ಬಾತ್. ನಿಮಗೆ ದೇಶದ ಆಡಳಿತ ನಡೆಸುವುದು ಬರುತ್ತಾ ಎಂದು ಪ್ರಶ್ನೆಗಳ ಸುರಿಮಳೆಗೈದರು.
Advertisement
ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಪರ ಸಿಎಂ ಇಬ್ರಾಹಿಂ ಪ್ರಚಾರ ನಡೆಸಿದರು. ಈ ವೇಳೆ ಹಲವು ಕಾಂಗ್ರೆಸ್ ಮುಖಂಡರು ಸಿಎಂ ಇಬ್ರಾಹಿಂ ಅವರೊಂದಿಗೆ ಪ್ರಚಾರದಲ್ಲಿ ಭಾಗವಹಿಸಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv