ಬೆಂಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿರುವ ಸಿಎಂ ಇಬ್ರಾಹಿಂ ಅವರು ಇಂದು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿಯವರು ಸಿಎಂ ಇಬ್ರಾಹಿಂಗೆ ಅಧಿಕಾರ ಹಸ್ತಾಂತರ ಮಾಡಿದರು. ಮಾಜಿ ಪ್ರಧಾನಿ, ಪಕ್ಷ ವರಿಷ್ಠ ಹೆಚ್.ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪಕ್ಷದ ಧ್ವಜ, ಪಕ್ಷದ ಶಾಲು ಹಾಕಿ ಅಧಿಕಾರ ನೀಡಿದರು. ಇಂದು ಬೆಳಗ್ಗೆ 11 ಗಂಟೆ ಸಮಯ ನೋಡಿ ಹೆಚ್‍ಡಿಡಿ ಅಧಿಕಾರ ಹಸ್ತಾಂತರ ಮಾಡಿದರು.
11 ಗಂಟೆ ಒಳ್ಳೆಯ ಸಮಯ ಅಂತ ಹೆಚ್‍ಡಿಡಿಯವರು ಅದೇ ಸಮಯಕ್ಕೆ ಸಿಎಂ ಇಬ್ರಾಹಿಂಗೆ ಅಧಿಕಾರ ನೀಡಿದರು. ಇತ್ತ ಜೆಡಿಎಸ್ ಸಂಸದೀಯ ಮಂಡಳಿಯ ಅಧ್ಯಕ್ಷರಾಗಿ ಎಚ್.ಕೆ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ ಮಾಡಿದರು. ರಾಜ್ಯಾಧ್ಯಕ್ಷ ಸ್ಥಾನ ವಾಪಸ್ ಪಡೆದು ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಯಿತು.
ಬಳಿಕ ಮಾತನಾಡಿದ ಹೆಚ್‍ಡಿಕೆ, ರಾಜಕೀಯದ ಬೆಳವಣಿಗೆ ಹಿನ್ನೆಲೆಯಲ್ಲಿ ಇಬ್ರಾಹಿಂ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದೇವೆ. ಎಲ್ಲರೂ ಚರ್ಚೆ ಮಾಡಿಯೇ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಇದನ್ನೂ ಓದಿ: ಸಿಎಂ ಇಬ್ರಾಹಿಂ ನಮ್ಮ ಪಕ್ಷದವನಲ್ಲ : ಸಿದ್ದು ಕಿಡಿ