ಬೆಂಗಳೂರು: ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ (BJP-JDS) ಅಪಪ್ರಚಾರ ನಡೆಸುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಅಪಪ್ರಚಾರ ನಡೆಸುತ್ತಿವೆ. ಇದಕ್ಕೆ ಮುಲಾಜಿಲ್ಲದೆ ಅಗ್ರೆಸಿವ್ ಆಗಿ ಕೌಂಟರ್ ಮಾಡುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹೇಳಿದ್ದಾರೆ ಎನ್ನಲಾಗಿದೆ.
ಸಂಸದ ಡಿ.ಕೆ.ಸುರೇಶ್ ನಿವಾಸದ ಡಿನ್ನರ್ ಮೀಟಿಂಗ್ ನಲ್ಲಿ ಸಚಿವರಿಗೆ ಸಿಎಂ ಹಲವು ಸೂಚನೆಗಳನ್ನು ನೀಡಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ಆಗುಹೋಗುಗಳ ಬಗ್ಗೆ ಹಾಗೂ ಚುನಾವಣಾ ಫಲಿತಾಂಶ ಕುರಿತು ಚರ್ಚೆ ನಡೆಯಿತು ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಸರ್ಕಾರವನ್ನೇ ಟಾರ್ಗೆಟ್ ಮಾಡಿಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ಫಲಿತಾಂಶದ ಬಳಿಕ ಇದು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಎಲ್ಲರೂ ಎಚ್ಚರಿಕೆಯಿಂದ ಇರಬೇಕಾಗುತ್ತೆ. ಜೊತೆಗೆ ಮುಲಾಜಿಲ್ಲದೆ ಕೌಂಟರ್ ಮಾಡಿ ಎಂದು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಗಾ ಒಬ್ಬ ಮಹಾನ್ ವ್ಯಕ್ತಿ, ಗಾಂಧೀಜಿ ಕನಸು ನನಸು ಮಾಡ್ತಿದ್ದಾರೆ: ಆಚಾರ್ಯ ಪ್ರಮೋದ್ ಕೃಷ್ಣಂ ಕಿಡಿ
ಸಚಿವರ ಜೊತೆ ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಇತ್ತೀಚೆಗೆ ರಾಜ್ಯದಲ್ಲಿ ನಡೆದಿರುವ ಲೋಕಸಭಾ ಚುನಾವಣೆಯಲ್ಲಿ ಯಾವ್ಯಾವ ಕ್ಷೇತ್ರದಲ್ಲಿ ಫಲಿತಾಂಶ ಏನಾಗಬಹುದು ಎಂಬುದನ್ನ ಅಂಕಿ-ಅಂಶಗಳೊಂದಿಗೆ ಚರ್ಚಿಸಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಸಂಬಂಧ ಕಾವೇರಿ ನ್ಯಾಯಾಧೀಕರಣ ನೀಡಿರುವ ಆದೇಶದ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.