-ಕೈ ಶಾಸಕನಿಗೆ 50 ಕೋಟಿ ಆಫರ್!
ಭೋಪಾಲ್: ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್‍ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.
Advertisement
ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್ ನಾಥ್ ಹೇಳಿದ್ದಾರೆ.
Advertisement
ಕಾಂಗ್ರೆಸ್ ಶಾಸಕರಿಗೆ ಪಕ್ಷ ತೊರೆಯಲು ಒಬ್ಬರಿಗೆ 50 ಕೋಟಿಯ ಆಫರ್ ನೀಡಲಾಗಿದೆ ಎಂದು ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ, ಬಿಜೆಪಿ ನಾಯಕರು ಯಾವೆಲ್ಲ ಆಫರ್ ನೀಡುತ್ತಿದ್ದಾರೆ ಎಂಬುವುದು ಗೊತ್ತಿಲ್ಲ ಎಂದರು. ಬಿಜೆಪಿ ಮಾತ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂಬ ವಾದವನ್ನು ಮಂಡಿಸುತ್ತಿದೆ.
Advertisement
Advertisement
2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 230 ಕ್ಷೇತ್ರಗಳ ಪೈಕಿ 114ರಲ್ಲಿ ಗೆಲುವಿನ ನಗೆ ಬೀರಿತ್ತು. ಬಿಜೆಪಿ 109, ಬಹುಜನ ಸಮಾಜ ಪಾರ್ಟಿ 2 ಮತ್ತು ಸಮಾಜವಾದಿ ಪಾರ್ಟಿ 1, ನಿರ್ದಲಿಯ ಪಕ್ಷ 4 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಬಿಎಸ್‍ಪಿ ಬೆಂಬಲ ಪಡೆದ ಕಾಂಗ್ರೆಸ್, ಮಧ್ಯಪ್ರದೇಶದಲ್ಲಿ ಕಮಲನಾಥ್ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಿದೆ.