ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶಿಸಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರು ರಾಯಚೂರಿನ ಎಂಜಿನಿಯರ್ ವಿದ್ಯಾರ್ಥಿನಿ ಮಧು ಪತ್ತಾರ್ ಬಗ್ಗೆ ತಮ್ಮ ಟ್ವಿಟ್ಟರಿನಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಈ ಘಟನೆ ಬಗ್ಗೆ ಸರಿಯಾದ ಕ್ರಮಕೈಗೊಳ್ಳುವಂತೆ ರಾಯಚೂರಿನ ಎಸ್‍ಪಿಗೆ ತಿಳಿಸಿದ್ದಾರೆ.
Advertisement
ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಪ್ರಕರಣ ಅತೀವ ನೋವು ತಂದಿದೆ. ಈ ಪ್ರಕರಣದ ಕುರಿತು ರಾಯಚೂರು ಎಸ್ ಪಿ ಯವರಿಂದ ಮಾಹಿತಿ ಪಡೆದಿದ್ದು ಒಬ್ಬನನ್ನು ಬಂಧಿಸಿದ್ದು ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 19, 2019
Advertisement
ಟ್ವೀಟ್‍ನಲ್ಲಿ ಏನಿದೆ?
ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಪ್ರಕರಣ ಅತೀವ ನೋವು ತಂದಿದೆ. ಈ ಪ್ರಕರಣದ ಕುರಿತು ರಾಯಚೂರು ಎಸ್‍ಪಿ ಅವರಿಂದ ಮಾಹಿತಿ ಪಡೆದಿದ್ದು ಒಬ್ಬನನ್ನು ಬಂಧಿಸಿದ್ದು ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಆಕೆಯ ಹೆತ್ತವರಿಗೆ ಭಗವಂತ ಈ ನೋವು ಭರಿಸುವ ಶಕ್ತಿ ಕೊಡಲಿ. ಹೆಣ್ಣುಮಕ್ಕಳ ಮೇಲಿನ ಇಂತಹ ಪೈಶಾಚಿಕ ಕೃತ್ಯ ಖಂಡನೀಯ.
Advertisement
ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಆಕೆಯ ಹೆತ್ತವರಿಗೆ ಭಗವಂತ ಈ ನೋವು ಭರಿಸುವ ಶಕ್ತಿ ಕೊಡಲಿ. ಹೆಣ್ಣುಮಕ್ಕಳ ಮೇಲಿನ ಇಂತಹ ಪೈಶಾಚಿಕ ಕೃತ್ಯ ಖಂಡನೀಯ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 19, 2019
Advertisement
ಏನಿದು ಪ್ರಕರಣ?
ಏಪ್ರಿಲ್ 16 ರಂದು ಮೃತ ಮಧು ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಪೊಲೀಸರು ಡೆತ್‍ನೋಟ್ ನೋಡಿ ಇದು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿದ್ದರು. ಬಳಿಕ ಮೃತ ಮಧು ತಾಯಿ ಇದು ಕೊಲೆಯಲ್ಲ. ನನ್ನ ಮಗಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಮೃತ ಮಧು ಗೆಳೆಯ ಸುದರ್ಶನ್‍ನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.